ಬೆಂಗಳೂರು: ಕರ್ನಾಟಕ ಉದ್ಯಾನವನ ಸಂರಕ್ಷಣೆ ತಿದ್ದುಪಡಿ ವಿಧೇಯಕವನ್ನು ರಾಜ್ಯ ಸಚಿವ ಸಂಪುಟ ಸಭೆ ವಾಪಸ್ ಪಡೆಯಲು ತೀರ್ಮಾನ ಕೈಗೊಂಡಿದೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಉದ್ಯಾನವನಗಳ ಸಂರಕ್ಷಣೆ ತಿದ್ದುಪಡಿ ವಿಧೇಯಕ ಹಿಂಪಡೆಯಲು ತೀರ್ಮಾನಿಸಲಾಗಿದೆ. ಸಾರ್ವಜನಿಕರು ಮತ್ತು ವಿರೋಧ ಪಕ್ಷಗಳ ತೀವ್ರ ವಿರೋಧದ ಬಳಿಕ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ.
ಕಳೆದ ಅಧಿವೇಶನದಲ್ಲಿ ತರಾತುರಿಯಲ್ಲಿ ಅಂಗೀಕರಿಸಲಾಗಿದ್ದ ಈ ವಿಧೇಯಕಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಬೆಂಗಳೂರಿನ ಉದ್ಯಾನವನಗಳು ನಗರದ ಶ್ವಾಸಕೋಶ ಇದ್ದಂತೆ. ಅಂತಹ ಪ್ರಮುಖ ಉದ್ಯಾನವನಗಳ 5% ಜಾಗವನ್ನು ಖಾಸಗಿ ಉದ್ದೇಶಗಳಿಗೆ ಬಳಸಲು ಅವಕಾಶ ಕಲ್ಪಿಸುವುದರಿಂದ ಪಾರ್ಕ್‌ಗಳು ನಶಿಸಿ ಹೋಗುತ್ತವೆ ಎಂಬುದು ಸಾರ್ವಜನಿಕರ ಪ್ರಮುಖ ಆತಂಕವಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ಮರಗಳನ್ನು ಕಡಿಯುವ ಸರ್ಕಾರದ ನಡೆಯ ಬಗ್ಗೆಯೂ ಟೀಕೆ ವ್ಯಕ್ತವಾಗಿತ್ತು.
ಕರ್ನಾಟಕ ಉದ್ಯಾನವನಗಳ ಸಂರಕ್ಷಣೆ ತಿದ್ದುಪಡಿ ವಿಧೇಯಕ ಕಳೆದ ವಿಧಾನಮಂಡಲ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಬಿಲ್ ಪಾಸ್ ಆಗಿತ್ತು. ಅಂಗೀಕೃತ ವಿಧೇಯಕವನ್ನು ರಾಜ್ಯಪಾಲರಿಗೂ ಕಳುಹಿಸಲಾಗಿತ್ತು. ಆದರೆ ಈ ವಿಧೇಯಕ ಜಾರಿಗೆ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.
ಈ ವಿಧೇಯಕದ ಪ್ರಕಾರ ಉದ್ಯಾನವನಗಳ ಶೇ.೫ರಷ್ಟು ಜಾಗ ಮಾರಾಟ, ಲೀಸ್ (ಬಾಡಿಗೆ), ಉಡುಗೊರೆ, ವಿನಿಮಯ ಅಥವಾ ಅಡಮಾನದ ಮೂಲಕ ಸರ್ಕಾರಿ ಇಲಕಹೆಗಳು, ಶಾಸನಬದ್ಧ ಸಂಸ್ಥೆಗಳು ಅಥವಾ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರಿಸುವ ಅವಕಾಶ ನೀಡುವ ವಿಧೇಯಕ ಇದಾಗಿತ್ತು. ಇದೀಗ ಈ ವಿಧೇಯಕವನ್ನು ರಾಜ್ಯ ಸರ್ಕಾಅರ ವಾಪಸ್ ಪಡೆದುಕೊಂಡಿದೆ ಎಂ<ದು ತಿಳಿದುಬಂದಿದೆ.

