BREAKING NEWS: ಬೆಂಗಳೂರಿನಲ್ಲಿ 100 ವರ್ಷಗಳಲ್ಲೇ 3ನೇ ಬಾರಿಗೆ ಅತಿ ಹೆಚ್ಚು ಮಳೆ: ಸಿಎಂ ಸಿದ್ದರಾಮಯ್ಯ ಮಾಹಿತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈ ಬಾರಿ ಅತಿ ಹೆಚ್ಚು ಮಳೆಯಾಗಿದ್ದು, 275ಮಿ.ಮೀ ದಾಖಲೆ ಮಳೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಸುರಿದ ಸತತ ಮಳೆಯಿಂದ ಜಿಲ್ಲೆಗಳಲ್ಲಿ ಆಗಿರುವ ಮಳೆಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿ ಮಾಹಿತಿ ಪಡೆದ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ, ಬೆಂಗಳೂರಿನಲ್ಲಿ ಮಳೆ ಅವಾಂತರದಿಂದ ಜನರಿಗೆ ಸಮಸ್ಯೆಯಾಗಿದೆ ಎಂದರು.

ಬೆಂಗಳೂರಿನಲ್ಲಿ 100 ವರ್ಷಗಳಲ್ಲಿಯೇ 3ನೇ ಬಾರಿಗೆ ಅತಿ ಹೆಚ್ಚು ಮಳೆಯಾಗಿದೆ. ಬೆಂಅಗ್ಳೂರು ನಗರದಲ್ಲಿಯೇ 275 ಮಿ.ಮೀ ಮಳೆಯಾಗಿದೆ. ಮಳೆ ಹೆಚ್ಚಾಗಿದ್ದರಿಂದ ಹಲವೆಡೆ ಜನರಿಗೆ ಸಮಸ್ಯೆಯಾಗಿದೆ. ಮನೆಗಳಿಗೆ ಮನೆ ನೀರು ನುಗ್ಗಿದೆ. ರಸ್ತೆಗಳಲ್ಲಿ ಗುಂಡಿಗಳು ಹೆಚ್ಚಾಗಿವೆ ಎಂದರು.

ಈಗಾಗಲೇ ರಾಜಕಾಲುವೆಗಳ ಒತ್ತುವರಿ ತೆರವಿಗೆಸೂಚಿಸಿದ್ದೇನೆ. ರಸ್ತೆಗುಂಡಿಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read