HomeKarnatakaBIG UPDATE: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ: ಅವಶೇಷಗಳಡಿ 16 ಕಾರ್ಮಿಕರು ಸಿಲುಕಿರುವ...

BIG UPDATE: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ: ಅವಶೇಷಗಳಡಿ 16 ಕಾರ್ಮಿಕರು ಸಿಲುಕಿರುವ ಶಂಕೆ

ಬೆಂಗಳೂರು: ಮಳೆ ಅಬ್ಬರದ ನಡುವೆ ಬೆಂಗಳೂರಿನಲ್ಲಿ ಮತ್ತೊಂದು ಅವಘಡ ಸಂಭವಿಸಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿರುವ ಘಟನೆ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ನಡೆದಿದೆ.

ಭಾರಿ ಮಳೆ ಅಬ್ಬರದ ನಡುವೆಯೇ 6 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿದ್ದು, ಅವಶೇಷಗಳ ಅಡಿಯಲ್ಲಿ 16 ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ಹೇಳುವ ಪ್ರಕಾರ 16ಕ್ಕೂ ಹೆಚ್ಚು ಜನ ಕಟ್ಟಡಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಕಟ್ಟಡಗಳ ಅವಶೇಷಗಡಿ ಎಷ್ಟು ಜನರು ಸಿಲುಕಿದ್ದಾರೆ ಎಂಬುದು ನಿಖರವಾಗಿ ತಿಳಿದುಬಂದಿಲ್ಲ.

ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular