HomeKarnatakaBIG NEWS: ಮುಂಜಾನೆಯಿಂದಲೇ ಬೆಂಗಳೂರಿನಲ್ಲಿ ವರುಣಾರ್ಭಟ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

BIG NEWS: ಮುಂಜಾನೆಯಿಂದಲೇ ಬೆಂಗಳೂರಿನಲ್ಲಿ ವರುಣಾರ್ಭಟ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಬೆನ್ನಲ್ಲೇ ರಾಜ್ಯ ರಾಜಧಾನಿ ಬೆಂಗಳೂನಲ್ಲಿ ಮುಂಜಾನೆಯಿಂದಲೇ ವರುಣಾರ್ಭಟ ಆರಂಭವಾಗಿದೆ.

ಹಲವೆಡೆ ಸಾಧಾರಣ ಮಳೆಯಾಗಿದ್ದರೆ. ಇನ್ನು ಹಲವೆಡೆ ಧಾರಾಕಾರ ಮಳೆಯಾಗಿದ್ದು, ಪ್ರಮುಖ ರಸ್ತೆಗಳು ಜಲಾವೃತಗೊಂಡಿವೆ. ರಸ್ತೆಗಳು ನದಿಯಂತಾಗಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಬೆಂಗಳೂರಿನ ಶಾಂತಿನಗರ, ಮೆಜೆಸ್ಟಿಕ್, ಆರ್.ಆರ್.ನಗರ, ಮೈಸೂರು ರೋಡ್ ಸೇರಿದಂತೆ ಹಲವೆಡೆ ಮಳೆಯಾಗಿದ್ದು, ಸಂಜೆ ವೇಳೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೊಡಗು, ಚಾಮರಾಜನಗರ, ಕೋಲಾರ, ಮೈಸೂರು ಸೇರಿದಂತೆ 16ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಮೇ 19ರಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular