HomeKarnatakaBREAKING NEWS: ಮುಂದಿನ ಮೂರು ಗಂಟೆಗಳಲ್ಲಿ ಭಾರಿ ಮಳೆ: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಆರಂಜ್...

BREAKING NEWS: ಮುಂದಿನ ಮೂರು ಗಂಟೆಗಳಲ್ಲಿ ಭಾರಿ ಮಳೆ: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಆರಂಜ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಧ್ಯಾಹ್ನದವರೆಗೂ ಬಿಡುವು ಪಡೆದಿದ್ದ ಮಳೆರಾಯ ಸಂಜೆಯಾಗುತ್ತಿದ್ದಂತೆ ಮತ್ತೆ ಅಬ್ಬರಿಸತೊಡಗಿದ್ದಾನೆ. ಬೆಂಗಳೂರಿನಾಧ್ಯಂತ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಬೆಂಗಳೂರಿನ ಹಲವೆಡೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದರೆ ಮಲ್ಲೇಶ್ವರಂ ಭಾಗದಲ್ಲಿ ಆಲಿಕಲ್ಲು ಮಳೆಯಾಗುತ್ತಿದೆ. ಈ ನಡುವೆ ಮುಂದಿನ ಮೂರು ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಮಳೆ ಅಬ್ಬರ ಇನ್ನಷ್ಟು ಜೋರಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಆನೇಕಲ್ ಭಾಗದಲ್ಲಿ ಭಾರಿ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಬೆಂಗಳೂರಿನಲ್ಲಿ ನಾಳೆಯೂ ಅತಿ ಹೆಚ್ಚು ಮಳೆಯಾಗಲಿದ್ದು, ಗುರುವಾರದವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular