HomeKarnatakaಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಜಿಲೆಟಿನ್ ಕಡ್ಡಿ ಹಾಗೂ ಡಿಟೋನೇಟರ್‌ ಗಳು ಜಪ್ತಿ

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಜಿಲೆಟಿನ್ ಕಡ್ಡಿ ಹಾಗೂ ಡಿಟೋನೇಟರ್‌ ಗಳು ಜಪ್ತಿ

ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಭಾಅರಿ ಪ್ರಮಾಣದ ಸ್ಫೋಟಕಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಜಾಜೂರು ಬಳಿ ಅಕ್ರಮವಾಗಿ ಸ್ಪೋಟಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದುದನ್ನು ಪತ್ತೆಮಾಡಿದ ಪೊಲೀಸರು ಬೃಹತ್ ಪ್ರಮಾಣದ ಜಿಲೆಟಿನ್ ಕಡ್ಡಿ ಹಾಗೂ ಡಿಟೋನೇಟರ್‌ಗಳನ್ನು ಜಪ್ತಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಾಬಸ್ ಪೇಟೆ ಪೊಲೀಸರು ಒಟ್ಟು 600 ಜಿಲೆಟಿನ್ ಕಡ್ಡಿಗಳು ಮತ್ತು 100 ಡಿಟೋನೇಟರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಸ್ಪೋಟಕ ವಸ್ತುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಶಿವಶಂಕರ್ ಎಂಬಾತನನ್ನು ಬಂಧಿಸಿದ್ದಾರೆ.

ಕಲ್ಲುಗಣಿಗಾರಿಕೆ ಚಟುವಟಿಕೆಗಳಿಗೆ ಸಾಮಾನ್ಯವಾಗಿ ಬಳಸುವ ಅಪಾಯಕಾರಿ ಜಿಲೆಟಿನ್ ಕಡ್ಡಿಗಳು ಮತ್ತು ಡಿಟೋನೇಟರ್‌ಗಳನ್ನು ಕಾರಿನಲ್ಲಿ ಸಾಗಿಸಲಾಗುತ್ತಿತ್ತು. ದಾಬಸ್ ಪೇಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುವ ಅಕ್ರಮ ಕಲ್ಲುಗಣಿಗಾರಿಕೆಗಾಗಿ ಈ ಸ್ಫೋಟಕಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಬಂಧಿತ ಶಿವಶಂಕರ್ ವಿರುದ್ಧ ಸ್ಪೋಟಕ ವಸ್ತುಗಳ ಕಾಯ್ದೆ ಮತ್ತು ಬಿಎನ್‌ಎಸ್‌ಎಸ್ ಸೆಕ್ಷನ್ 288ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಕ್ರಮ ಸ್ಪೋಟಕ ಸಾಗಾಟದ ಮೂಲ, ಸಾಗಾಟದ ಉದ್ದೇಶ ಮತ್ತು ಅದಕ್ಕೆ ಸಂಬಂಧಿಸಿದ ಅಕ್ರಮ ಗಣಿಗಾರಿಕೆ ಚಟುವಟಿಕೆಗಳ ಬಗ್ಗೆ ದಾಬಸ್ ಪೇಟೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular