HomeLatest Newsಬೆಂಗಳೂರು ಟ್ರಾಫಿಕ್‌ಗೆ ಮಾಸ್ಟರ್ ಪ್ಲಾನ್: 11 ಎಲಿವೇಟೆಡ್ ಕಾರಿಡಾರ್‌ಗಳಿಗೆ ಸಂಪುಟ ಗ್ರೀನ್ ಸಿಗ್ನಲ್: ರೋಹಿತ್ ವೇಮುಲ...

ಬೆಂಗಳೂರು ಟ್ರಾಫಿಕ್‌ಗೆ ಮಾಸ್ಟರ್ ಪ್ಲಾನ್: 11 ಎಲಿವೇಟೆಡ್ ಕಾರಿಡಾರ್‌ಗಳಿಗೆ ಸಂಪುಟ ಗ್ರೀನ್ ಸಿಗ್ನಲ್: ರೋಹಿತ್ ವೇಮುಲ ಕಾಯ್ದೆ ಜಾರಿಗೆ ಐತಿಹಾಸಿಕ ನಿರ್ಧಾರ

ಬೆಂಗಳೂರು: ಸಿಲಿಕಾನ್ ಸಿಟಿಯ ಟ್ರಾಫಿಕ್ ಕಷ್ಟಕ್ಕೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಬೃಹತ್ ಯೋಜನೆಗೆ ಕೈ ಹಾಕಿದೆ. ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಮಾರು 13,262 ಕೋಟಿ ರೂ. ವೆಚ್ಚದ 11 ಎಲಿವೇಟೆಡ್ ಕಾರಿಡಾರ್‌ ನಿರ್ಮಾಣ ಸೇರಿದಂತೆ ಹಲವು ಐತಿಹಾಸಿಕ ನಿರ್ಣಯಗಳಿಗೆ ಅನುಮೋದನೆ ನೀಡಲಾಗಿದೆ.ಸಭೆಯ ಬಳಿಕ ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರು ಹಂಚಿಕೊಂಡ ಪ್ರಮುಖ ಮಾಹಿತಿಗಳು ಇಲ್ಲಿವೆ:

ಬೆಂಗಳೂರು ಮೂಲಸೌಕರ್ಯಕ್ಕೆ ಬೂಸ್ಟ್

11 ಎಲಿವೇಟೆಡ್ ಕಾರಿಡಾರ್: ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ 75.6 ಕಿ.ಮೀ ಉದ್ದದ 11 ಕಾರಿಡಾರ್ ನಿರ್ಮಾಣಕ್ಕೆ ಅಸ್ತು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೋಟರಿ ಫ್ಲೈಓವರ್: ಐಓಸಿ ಜಂಕ್ಷನ್‌ನಲ್ಲಿ ಎಲಿವೇಟೆಡ್ ರೋಟರಿ ಫ್ಲೈಓವರ್ ಮತ್ತು ಬೈಯಪ್ಪನಹಳ್ಳಿಯಲ್ಲಿ ಹೆಚ್ಚುವರಿ 2-ಲೇನ್ ROB ನಿರ್ಮಾಣಕ್ಕೆ 436.44 ಕೋಟಿ ರೂ. ಮೀಸಲಿಡಲಾಗಿದೆ.

ತ್ಯಾಜ್ಯದಿಂದ ಬಯೋಗ್ಯಾಸ್: ಜಲಮಂಡಳಿಯ 5 ಸಂಸ್ಕರಣಾ ಘಟಕಗಳಲ್ಲಿ ತ್ಯಾಜ್ಯದಿಂದ ಬಯೋಗ್ಯಾಸ್ ಉತ್ಪಾದಿಸುವ ಯೋಜನೆಗೆ ಪಿಪಿಪಿ ಮಾದರಿಯಲ್ಲಿ ಒಪ್ಪಿಗೆ ನೀಡಲಾಗಿದೆ.

ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ: ರೋಹಿತ್ ವೇಮುಲ ಕಾಯ್ದೆ

ವಿಶ್ವವಿದ್ಯಾಲಯಗಳಲ್ಲಿ ನಡೆಯುವ ತಾರತಮ್ಯ ಮತ್ತು ಅನ್ಯಾಯವನ್ನು ತಡೆಯಲು ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ. ‘ಕರ್ನಾಟಕ ರೋಹಿತ್ ವೇಮುಲ ವಿಧೇಯಕ’ ಮಂಡನೆಗೆ ಸಂಪುಟ ಅನುಮೋದನೆ ನೀಡಿದ್ದು, ವಿದ್ಯಾರ್ಥಿಗಳ ಘನತೆಯ ಹಕ್ಕನ್ನು ಎತ್ತಿಹಿಡಿಯಲು ಈ ಕಾಯ್ದೆ ಸಹಕಾರಿಯಾಗಲಿದೆ.

ಇತರ ಪ್ರಮುಖ ನಿರ್ಧಾರಗಳು:

ಆಸ್ತಿ ತೆರಿಗೆ ವಿನಾಯಿತಿ: ರಾಜಭವನ, ಕಂಠೀರವ ಕ್ರೀಡಾಂಗಣ ಸೇರಿದಂತೆ ಪ್ರಮುಖ ಸರ್ಕಾರಿ ಕಟ್ಟಡಗಳಿಗೆ ಆಸ್ತಿ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ.

ಕೆಕೆಆರ್‌ಟಿಸಿ ಹೊಸ ಭವನ: ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ ಕೇಂದ್ರ ಕಚೇರಿ ನಿರ್ಮಾಣಕ್ಕೆ 20 ಕೋಟಿ ರೂ. ಮಂಜೂರು ಮಾಡಲಾಗಿದೆ.

ಕಾರವಾರ ವಿಮಾನ ನಿಲ್ದಾಣ: ವಿಮಾನ ನಿಲ್ದಾಣ ಅಭಿವೃದ್ಧಿ ಜವಾಬ್ದಾರಿಯನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ (AAI) ವಹಿಸಲಾಗಿದೆ.

ಉದ್ಯೋಗ ಭರ್ತಿ: ರಾಜ್ಯದಲ್ಲಿ ಖಾಲಿ ಇರುವ 56,000 ಹುದ್ದೆಗಳ ಭರ್ತಿಗೆ ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಭರವಸೆ ನೀಡಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular