HomeEntertainment16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ: ನಟ ಕಿಶೋರ್ ರಾಯಭಾರಿಯಾಗಿ ಆಯ್ಕೆ

16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ: ನಟ ಕಿಶೋರ್ ರಾಯಭಾರಿಯಾಗಿ ಆಯ್ಕೆ

ಬೆಂಗಳೂರು: 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಖ್ಯಾತ ನಟ ಕಿಶೋರ್ ಕುಮಾರ್ ಅವರನ್ನು ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ.

ಮಾರ್ಚ್ 1ರಿಂದ 8ರವರೆಗೆ ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದ್ದು, ನಟ ಕಿಶೋರ್ ಅವರನ್ನು ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.

ಈ ಬಾರಿಯ ಚಲನಚಿತ್ರೋತ್ಸವ ‘ಸರ್ವಜನಂಗದ ಶಾಂತಿಯ ತೋಟ’ ಶೀರ್ಷಿಕೆಯಡಿ ನಡೆಯಲಿದೆ. ನಟ ಕಿಶೋರ್ ಕನ್ನಡ, ಹಿಂದಿ, ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿಯೂ ಅಭಿನಯಿದ್ದು, ಚಲನ ಚಿತ್ರೋತ್ಸವಕ್ಕೆ ಹೆಚ್ಚಿನ ಪ್ರಚಾರ ತಂದುಕೊಡುವ ಸಲುವಾಗಿ ಅವರನ್ನು ರಾಯಭಾರಿಯನ್ನಾಗಿ ಆಯ್ಕೆಮಾಡಲಗಿದೆ ಎಂದು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular