HomeKarnatakaBREAKING NEWS: ಬೆಂಗಳೂರು: ಉದ್ಯಮಿಗಳ ಮನೆ ಮೇಲೆ ಐಟಿ ಅಧಿಕಾರಿಗಳ ದಿಢೀರ್ ದಾಳಿ

BREAKING NEWS: ಬೆಂಗಳೂರು: ಉದ್ಯಮಿಗಳ ಮನೆ ಮೇಲೆ ಐಟಿ ಅಧಿಕಾರಿಗಳ ದಿಢೀರ್ ದಾಳಿ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮತದಾನಕ್ಕೆ ಕೆಲ ದಿನಗಳು ಮಾತ್ರ ಬಾಕಿ ಇರುವಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಉದ್ಯಮಿಗಳ ಮನೆ ಮೇಲೆ ಐಟಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಹತ್ತಕ್ಕೂ ಹೆಚ್ಚು ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಉದ್ಯಮಿಗಳ ಮನೆಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಚುನಾವಣೆ ಅಕ್ರಮದ ಅನುಮಾನ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ರಿಯಲ್ ಎಶ್ತೇಟ್ ಉದ್ಯಮಿಯೊಬ್ಬರ ಮನೆ ಮೇಳೆ ದಾಳಿ ನಡೆಸಿದ್ದರು. ಧಾರವಾಡದಲ್ಲಿ ಉದ್ಯಮಿಯೊಬ್ಬರ ಅಕೌಂಟೆಂಟ್ ಮನೆಯಲ್ಲಿ 18 ಕೋಟಿ ಹಣ ಪತ್ತೆಯಾಗಿತ್ತು. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಉದ್ಯಮಿಗಳ ಮನೆಯನ್ನೇ ಗುರಿಯಾಗಿಸಿ ಬೆಂಗಳೂರಿನಲ್ಲಿಯೂ ದಾಳಿ ನಡೆದಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular