HomeKarnatakaದೀಪಾವಳಿ ಪ್ರಯಾಣಿಕರ ದಟ್ಟಣೆ ನಿಯಂತ್ರಿಸಲು ವಿಶೇಷ ರೈಲು

ದೀಪಾವಳಿ ಪ್ರಯಾಣಿಕರ ದಟ್ಟಣೆ ನಿಯಂತ್ರಿಸಲು ವಿಶೇಷ ರೈಲು

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ನೈರುತ್ಯ ರೈಲ್ವೆ ಎರಡು ಟ್ರಿಪ್ ವಿಶೇಷ ರೈಲುಗಳ ಸೇವೆ ಕಲ್ಪಿಸಿದೆ.

ಬೆಂಗಳೂರು -ಕಲಬುರಗಿ ವಿಶೇಷ ಎಕ್ಸ್ಪ್ರೆಸ್ ರೈಲು(06533) ಅಕ್ಟೋಬರ್ 30ರಂದು ಮತ್ತು ನವೆಂಬರ್ 2ರಂದು ರಾತ್ರಿ 9:15ಕ್ಕೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಡಲಿದೆ. ಈ ರೈಲು ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆಧೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ ಯಾದಗಿರಿ, ಶಹಾಬಾದ್ ನಿಲ್ದಾಣಗಳ ಮೂಲಕ ಹಾದು ಮರುದಿನ ಬೆಳಗ್ಗೆ 7:40ಕ್ಕೆ ಕಲಬುರಗಿ ತಲುಪಲಿದೆ.

ಹಿಂದಿರುಗುವ ರೈಲು(06534) ಕಲಬುರಗಿಯಿಂದ ಅಕ್ಟೋಬರ್ 31 ಮತ್ತು ನವೆಂಬರ್ 3ರಂದು ಬೆಳಗ್ಗೆ 9:30 ಕ್ಕೆ ಹೊರಡಲಿದ್ದು, ಅದೇ ದಿನ ರಾತ್ರಿ 8 ಗಂಟೆಗೆ ಎಸ್.ಎಂ.ವಿ.ಟಿ. ಬೆಂಗಳೂರು ತಲುಪಲಿದೆ. 12 ಜನರಲ್ ಸೆಕೆಂಡ್ ಕ್ಲಾಸ್, 3 ಸ್ಲೀಪರ್ ಕ್ಲಾಸ್, 2 ಎಸಿ ತ್ರೀ ಟೈಯರ್, ಒಂದು ಲಗೇಜ್/ ಬ್ರೇಕ್ ವ್ಯಾನ್ ಕಂ ಜನರೇಟರ್ ಕಾರ್ ಮತ್ತು 1 SLRD ಸೇರಿ 19 ಬೋಗಿಗಳು ಇರಲಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular