HomeKarnatakaBIG NEWS: ಮುಂದಿನ ಐದು ದಿನಗಳವರೆಗೆ ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

BIG NEWS: ಮುಂದಿನ ಐದು ದಿನಗಳವರೆಗೆ ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಅಬ್ಬರ ಜೋರಾಗಿದ್ದು, ಮುಂದಿನ ಐದು ದಿನಗಳವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಮಳೆ ಅಬ್ಬರಿಸಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಎರಡು ದಿನಗಳ ಕಾಲ ವರುಣಾರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಅ.22ರವರೆಗೆ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಹಲವೆಡೆ ಮಳೆ ಮುಂದುವರೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಚಿತ್ರದುರ್ಗ, ಹಾಸನ, ದಾವಣಗೆರೆ, ಬಳ್ಳಾರಿ, ಗದಗ, ಕೊಪ್ಪಳ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಲೆ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ

For Latest News Updates, Join Our Whatsapp Community🚩
RELATED ARTICLES

Most Popular