ಕೆಎಎಸ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಬೆಂಗಳೂರು, ಧಾರವಾಡದಲ್ಲಿ ಮಾತ್ರ ಮುಖ್ಯ ಪರೀಕ್ಷೆ

ಬೆಂಗಳೂರು: ಗೆಜೆಟೆಡ್ ಪ್ರಬೋಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ 384 ಹುದ್ದೆಗಳ ನೇಮಕಾತಿಗೆ ಮಾರ್ಚ್ 28 ರಿಂದ ಮುಖ್ಯ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗ(KPSC) ತಿಳಿಸಿದೆ.

ಫೆಬ್ರವರಿ 17 ರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಮಾರ್ಚ್ 3 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿರುತ್ತದೆ. ಡಿಸೆಂಬರ್ 29ರಂದು ಪೂರ್ವಭಾವಿ ಮರು ಪರೀಕ್ಷೆ ನಡೆದಿತ್ತು. 1:15 ಅನುಪಾತದಲ್ಲಿ ಅರ್ಹ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಫೆಬ್ರವರಿ 10ರಂದು ಪ್ರಕಟಿಸಲಾಗಿದೆ.

ಮಾರ್ಚ್ 28, 29 ಮತ್ತು ಏಪ್ರಿಲ್ 1, 2 ರಂದು ಮುಖ್ಯ ಪರೀಕ್ಷೆ ನಡೆಯಲಿದೆ. ಬೆಂಗಳೂರು ಮತ್ತು ಧಾರವಾಡ ಜಿಲ್ಲಾ ಕೇಂದ್ರಗಳಲ್ಲಿ ಮಾತ್ರ ಮುಖ್ಯ ಪರೀಕ್ಷೆ ನಡೆಯಲಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read