HomeKarnatakaBREAKING: ಬೆಂಗಳೂರಿನಲ್ಲಿ ಮಹಿಳೆ ಹತ್ಯೆಗೈದು ತುಂಡು ತುಂಡಾಗಿ ಕತ್ತರಿಸಿ ಫ್ರಿಜ್ ನಲ್ಲಿಟ್ಟ ಪ್ರಕರಣ: ಆರೋಪಿ ಗುರುತು...

BREAKING: ಬೆಂಗಳೂರಿನಲ್ಲಿ ಮಹಿಳೆ ಹತ್ಯೆಗೈದು ತುಂಡು ತುಂಡಾಗಿ ಕತ್ತರಿಸಿ ಫ್ರಿಜ್ ನಲ್ಲಿಟ್ಟ ಪ್ರಕರಣ: ಆರೋಪಿ ಗುರುತು ಪತ್ತೆ: ಕಮಿಷ್ನರ್ ಮಾಹಿತಿ

ಬೆಂಗಳೂರು: ಬೆಂಗಳೂರಿನ ವೈಯ್ಯಾಲಿ ಕಾವಲ್ ನಲ್ಲಿ ಮಹಿಳೆಯನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಜ್ ನಲ್ಲಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗುರುತು ಪತ್ತೆಯಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷ್ನರ್ ಬಿ.ದಯಾನಂದ್ ತಿಳಿಸಿದ್ದರೆ.

ವೈಯ್ಯಾಲಿಕಾವಲ್ ಮನೆಯಲ್ಲಿ ಮಹಾಲಕ್ಷ್ಮೀ ಎಂಬ ಮಹಿಳೆಯನ್ನು ಕೊಲೆಗೈದು ದೇಹವನ್ನು 59 ತುಂಡುಗಳನ್ನಾಗಿ ಕತ್ತರಿಸಿ ಫ್ರಿಜ್ ನಲ್ಲಿಟ್ಟು ಆರೋಪಿ ಎಸ್ಕೇಪ್ ಆಗಿದ್ದಾನೆ. 10-15 ದಿನಗಳ ಹಿಂದೆಯೇ ಮಹಾಲಕ್ಷ್ಮೀ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದ್ದು, ಹಂತಕ ಮೃತದೇಹವನ್ನು ಪೀಸ್ ಪೀಸ್ ಮಾಡಿ ಫ್ರಿಜ್ ನಲ್ಲಿ ಇಟ್ಟಿದ್ದಾನೆ. ಮಹಾಲಕ್ಷ್ಮೀ ಪತಿ ಹಾಗೂ ತಾಯಿ ಆಕೆ ಫೋನ್ ಸ್ವಿಚ್ಡ್ ಆಫ್ ಇದೆ ಎಂದು ಮನೆ ಬಳಿ ಬಂದು ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು ಮಹಾಲಕ್ಷ್ಮೀ ಹತ್ಯೆ ಪ್ರಕರಣದ ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಮಿಷ್ನರ್ ದಯಾನಂದ್, ಕೊಲೆ ಆರೋಪಿ ಗುರುತು ಪತ್ತೆಯಾಗಿದೆ. ಶೀಘ್ರದಲ್ಲಿಯೇ ಅತನನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಂತಕ ಹೊರ ರಾಜ್ಯದವನು. ಆದರೆ ಬೆಂಗಳೂರಿನಲ್ಲಿಯೇ ವಾಸವಾಗಿದ್ದ. ಶೀಘ್ರದಲ್ಲಿ ಆತನನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular