HomeKarnatakaಪ್ರಯಾಣಿಕರೇ ಗಮನಿಸಿ: ಜ. 19ರಂದು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರೇ ಗಮನಿಸಿ: ಜ. 19ರಂದು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು: ಜನವರಿ 19ರಂದು ಮೆಟ್ರೋ ನೇರಳೆ ಮಾರ್ಗ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಕಬ್ಬನ್ ಪಾರ್ಕ್- ಎಂಜಿ ರೋಡ್ ನಡುವೆ ಹಳಿ ನಿರ್ವಹಣಾ ಕಾಮಗಾರಿ ಹಿನ್ನಲೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಹೇಳಲಾಗಿದೆ.

ನಿರ್ವಹಣೆ ಕಾರಣದಿಂದಾಗಿ ನೇರಳೆ ಮಾರ್ಗದ ಕೆಂಪೇಗೌಡ ಮೆಜೆಸ್ಟಿಕ್ ನಿಲ್ದಾಣ ಮತ್ತು ಇಂದಿರಾ ನಗರ ನಿಲ್ದಾಣಗಳ ನಡುವಿನ ಸೇವೆಯಲ್ಲಿ ವ್ಯತ್ಯಾಸ ಉಂಟಾಗುತ್ತದೆ. ಈ ನಿಲ್ದಾಣ ನಡುವೆ ಮೂರು ಗಂಟೆ ಮೆಟ್ರೋ ಸೇವೆ ಇರುವುದಿಲ್ಲ. ಜನವರಿ 19ರಂದು ಬೆಳಗ್ಗೆ 7 ಗಂಟೆಯಿಂದ 10 ಗಂಟೆಯವರೆಗೆ ಮೆಟ್ರೋ ಸೇವೆ ಇರುವುದಿಲ್ಲ. ಹಸಿರು ಮಾರ್ಗದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ನಮ್ಮ ಮೆಟ್ರೋದಿಂದ ಮಾಧ್ಯಮ ಪ್ರಕಟಣೆ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular