HomeKarnatakaBIG NEWS: ಮೆಟ್ರೋ ಪಿಲ್ಲರ್ ಬಿದ್ದು ತಾಯಿ-ಮಗು ಸಾವು ಪ್ರಕರಣ; 8 ಜನರ ವಿರುದ್ಧ FIR...

BIG NEWS: ಮೆಟ್ರೋ ಪಿಲ್ಲರ್ ಬಿದ್ದು ತಾಯಿ-ಮಗು ಸಾವು ಪ್ರಕರಣ; 8 ಜನರ ವಿರುದ್ಧ FIR ದಾಖಲು

ಬೆಂಗಳೂರು: ಮೆಟ್ರೋ ಕಾಮಗಾರಿ ವೇಳೆ ಕಂಬಿ ಕುಸಿದು ತಾಯಿ ಹಾಗೂ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದಪುರ ಠಾಣೆಯಲ್ಲಿ ಎನ್ ಸಿ ಸಿ ಕಂಪನಿಯ 6 ಅಧಿಕಾರಿಗಳು ಸೇರಿದಂತೆ 8 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ನಾಗಾರ್ಜುನ ಕನ್ಸ್ ಸ್ಟ್ರಕ್ಷನ್ ಕಂಪನಿಯ 6 ಅಧಿಕಾರಿಗಳು ಸೇರಿ 8 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ನಾಗಾರ್ಜುನ ಕನ್ ಸ್ಟ್ರಕ್ಷನ್ ಕಂಪನಿ, ಪ್ರಭಾಕರ್, ಚೈತನ್ಯ, ಮಥಾಯಿ, ವಿಕಾಸ್ ಸಿಂಗ್, ಲಕ್ಷ್ಮೀಪತಿ, ವೆಂಕಟೇಶ್ ಶೆಟ್ಟಿ, ಮಹೇಶ್ ಬೆಂಡೇಕರಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೆಟ್ರೋ ಪಿಲ್ಲರ್ ಕಾಮಗಾರಿ ವೇಳೆ ಕಂಬಿ ಕುಸಿದು ಬಿದ್ದು ಬೈಕ್ ನಲ್ಲಿ ತೆರಳುತ್ತಿದ್ದ ತಾಯಿ ಹಾಗೂ ಎರಡುವರೆ ವರ್ಷದ ಮಗು ಸಾವನ್ನಪ್ಪಿದ್ದರು. ಬಿ ಎಂ ಆರ್ ಸಿ ಎಲ್ ಹಾಗೂ ಮೆಟ್ರೋ ಕಾಮಗಾರಿ ನಡೆಸುತ್ತಿರುವ ಅಧಿಕಾರಿಗಳ ನಿರ್ಲಕ್ಷವೇ ಘಟನೆಗೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ 8 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular