HomeKarnatakaBIG NEWS: ಬೆಂಗಳೂರು- ಮುಂಬೈ 14 ಲೇನ್ ಎಕ್ಸ್ ಪ್ರೆಸ್ ವೇ ಕಾಮಗಾರಿ ಶೀಘ್ರ ಆರಂಭ

BIG NEWS: ಬೆಂಗಳೂರು- ಮುಂಬೈ 14 ಲೇನ್ ಎಕ್ಸ್ ಪ್ರೆಸ್ ವೇ ಕಾಮಗಾರಿ ಶೀಘ್ರ ಆರಂಭ

ಪುಣೆ: ಮುಂಬೈ -ಬೆಂಗಳೂರು ಹೆದ್ದಾರಿ ದಟ್ಟಣೆಯಿಂದ ಕೂಡಿದ್ದು, ಉಭಯ ನಗರಗಳ ನಡುವೆ ಹೊಸ 14 ಪಥದ ಎಕ್ಸ್ ಪ್ರೆಸ್ ವೇ ನಿರ್ಮಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಪುಣೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ಟೆಂಡರ್ ಪ್ರಕ್ರಿಯೆ ಆರಂಭಿಸಿದ್ದು, ಇನ್ನು ಆರು ತಿಂಗಳಲ್ಲಿ ಕಾಮಗಾರಿ ಶುರುವಾಗಲಿದೆ ಎಂದು ತಿಳಿಸಿದ್ದಾರೆ.

ಮುಂಬೈನ ಅಟಲ್ ಸೇತುವೆಯಿಂದ ಈ ಹೊಸ ರಸ್ತೆ ಶುರುವಾಗಲಿದೆ. ಪುಣೆ ರಿಂಗ್ ರಸ್ತೆಯ ಮೂಲಕ ಸಾಗಲಿದೆ. ಛತ್ರಪತಿ ಸಂಭಾಜಿ ನಗರವನ್ನು ಕೂಡ ಹಾದು ಹೋಗಲಿದ್ದು, ಇದು ಹಾಲಿ ರಸ್ತೆಗೆ ಬದಲಿಯಾಗಲಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂಬೈ -ಬೆಂಗಳೂರು 14 ಪಥದ ಎಕ್ಸ್ ಪ್ರೆಸ್ ವೇ ನಿರ್ಮಾಣದಿಂದ ಹಾಲಿ ಮುಂಬೈನ ಎಕ್ಸ್ ಪ್ರೆಸ್ ವೇನ  50ರಷ್ಟು ವಾಹನಗಳು ಹೊಸ ಹೆದ್ದಾರಿಗೆ ವರ್ಗಾವಣೆ ಆಗುತ್ತವೆ. ಮುಂದಿನ ಆರು ತಿಂಗಳಲ್ಲಿ ಕೆಲಸ ಶುರುವಾಗಲಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular