HomeCrimeBREAKING: ಸ್ನೇಹಿತನೊಂದಿಗೆ ನಿಂತಿದ್ದ ಯುವಕನ ಎದೆಗೆ ಚಾಕುವಿನಿಂದ ಇರಿದು ಹತ್ಯೆ

BREAKING: ಸ್ನೇಹಿತನೊಂದಿಗೆ ನಿಂತಿದ್ದ ಯುವಕನ ಎದೆಗೆ ಚಾಕುವಿನಿಂದ ಇರಿದು ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಯುವಕನನ್ನು ರೌಡಿಶೀಟರ್ ಹತ್ಯೆ ಮಾಡಿದ್ದಾನೆ. ಬನಶಂಕರಿ ಕಾವೇರಿ ನಗರದ 8ನೇ ಕ್ರಾಸ್ ನಲ್ಲಿ ಘಟನೆ ನಡೆದಿದೆ.

21 ವರ್ಷದ ವಿಕ್ರಂ ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್ ವಸೀಂ(28) ಎಂಬಾತ ಕೃತ್ಯವೆಸಗಿದ್ದಾನೆ. ಕೆಲ ವರ್ಷಗಳ ಹಿಂದೆ ಆರೋಪಿ ವಸೀಂ ಮೇಲೆ ವಿಕ್ರಂ ಹಲ್ಲೆ ಮಾಡಿದ್ದ. ಇದೇ ದ್ವೇಷದಿಂದ ಸ್ನೇಹಿತನ ಜೊತೆ ನಿಂತಿದ್ದಾಗ ಎದೆಗೆ ಇರಿದಿದ್ದಾನೆ, ಗಂಭೀರವಾಗಿ ಗಾಯಗೊಂಡಿದ್ದ ವಿಕ್ರಂನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಪೊಲೀಸರು ಆರೋಪಿ ವಸೀಂನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular