HomeCrimeBREAKING: ಬಾರ್ ನಲ್ಲಿ ಮದ್ಯ ಹೀರುವಾಗಲೇ ರೌಡಿಯ ಬರ್ಬರ ಹತ್ಯೆ: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದು ಹಂತಕರು...

BREAKING: ಬಾರ್ ನಲ್ಲಿ ಮದ್ಯ ಹೀರುವಾಗಲೇ ರೌಡಿಯ ಬರ್ಬರ ಹತ್ಯೆ: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದು ಹಂತಕರು ಪರಾರಿ

ಬೆಂಗಳೂರು: ಬಾರ್ ನಲ್ಲಿ ಮದ್ಯ ಸೇವಿಸುವವಾಗಲೇ ರೌಡಿಶೀಟರ್ ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಯಲಹಂಕದ ಕೊಡಗಿ ತಿರುಮಲಪುರ ನಿವಾಸಿ ಜಯರಾಮ್(42) ಹತ್ಯೆಯಾದ ರೌಡಿಶೀಟರ್. ಮಂಗಳವಾರ ರಾತ್ರಿ 9:30ರ ಸುಮಾರಿಗೆ ಹೆಸರುಘಟ್ಟ ರಸ್ತೆಯ ತಿರುಮಲಪುರ ವಿಲೇಜ್ ನ ಸಾಯಿ ಬಾರ್ ನಲ್ಲಿ ಘಟನೆ ನಡೆದಿದೆ.

ಜಯರಾಮ್ ಮೇಲೆ ಏಕಾಏಕಿ ದಾಳಿ ಮಾಡಿದ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ. ಜಯರಾಮ್ ಯಲಹಂಕ ಉಪನಗರ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದು, ಕೊಲೆ, ದರೋಡೆ, ಹಲ್ಲೆ ಸೇರಿದಂತೆ ವಿವಿಧ ಪ್ರಕರಣ ದಾಖಲಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಸ್ತುತ ಕೊಡಗಿ ತಿರುಮಲಪುರದಲ್ಲಿ ಪತ್ನಿ, ಮಕ್ಕಳೊಂದಿಗೆ ನೆಲೆಸಿದ್ದ ಜಯರಾಮ್ ಕೋಳಿ ಅಂಗಡಿ ನಡೆಸುತ್ತಿದ್ದ. ಮಂಗಳವಾರ ಮದ್ಯ ಸೇವಿಸಲು ಬಾರ್ ಗೆ ಬಂದಾಗ ನಾಲ್ಕೈದು ಜನ ದಾಳಿ ಮಾಡಿ ಹತ್ಯೆ ಮಾಡಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆಗೈದ ಶಂಕೆ ವ್ಯಕ್ತವಾಗಿದೆ. ಸೋಲದೇವನಹಳ್ಳಿ ಠಾಣೆ ಪೋಲೀಸರು ಕೊಲೆ ಪ್ರಕರಣ ದಾಖಲೆಸಿಕೊಂಡು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular