HomeKarnatakaBREAKING NEWS: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

BREAKING NEWS: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಡಿವೈಡರ್ ಗೆ ಕಾರು ಡಿಕ್ಕಿಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಶಿಂಷಾ ನದಿ ಬಳಿ ಈ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರು ಹೆದ್ದಾರಿ ಬಳಿ ನದಿ ಸೇತುವೆಯ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಶಂಕರ್ ಹಾಗೂ ಮಹದೇವು ಮೃತ ದುದೈವಿಗಳು. ಕಿಶೋರ್ ಎಂಬುವವರಿಗೆ ಗಂಭಿರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular