BIG NEWS : ನಾಳೆ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಮಾಡುವುದಿಲ್ಲ : ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ

ಬೆಂಗಳೂರು : ನಾಳೆ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಮಾಡುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ನಾಳೆ ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಅಲ್ಲದೇ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿತ್ತು. ಇದೀಗ ಟ್ವೀಟ್ ಮೂಲಕ ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ.

ನಾಳೆ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಮಾಡುವುದಿಲ್ಲ ಮತ್ತು ಮಾಡುವುದು ತಪ್ಪಾಗುತ್ತದೆ. ಮಂಡ್ಯದ ಸಂಜಯ್ ಸರ್ಕಲ್ ನಲ್ಲಿ ಪ್ರತಿಭಟನೆ ಇದೆ. ಧನ್ಯವಾದಗಳು ಎಂದು ಟ್ವೀಟ್ ಮೂಲಕ ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ.

ಕಾವೇರಿ ಕೊಳ್ಳದದ ಜಲಾಶಯಗಳಿಂದ ನೀರು ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ನಿಂದ ಯಾವುದೇ ಸ್ಪಷ್ಟ ಆದೇಶವಿಲ್ಲದಿದ್ದರೂ ರಾಜ್ಯ ಸರಕಾರ ತಮಿಳುನಾಡಿಗೆ ನೀರು ಬಿಡುವ ಮೂಲಕ ಮಂಡ್ಯ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ಕಿಡಿಕಾರಿದೆ. ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಜಲಾಶಯಗಳಲ್ಲಿ ನೀರು ಸಹ ಕಡಿಮೆ ಇದೆ. ಆದರೂ ಏಕಾಏಕಿ ನೀರು ಬಿಡುವ ತೀರ್ಮಾನ ಎಷ್ಟು ಸರಿ’ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣಗೌಡ ಪ್ರಶ್ನಿಸಿದ್ದಾರೆ.

https://twitter.com/mepratap/status/1693114861310689773

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read