HomeKarnatakaಬೆಂಗಳೂರು-ಮೈಸೂರು ರಸ್ತೆಯಲ್ಲಿ ಭೀಕರ ಅಪಘಾತ: ಚಾಲಕ ಸ್ಥಳದಲ್ಲೇ ಸಾವು

ಬೆಂಗಳೂರು-ಮೈಸೂರು ರಸ್ತೆಯಲ್ಲಿ ಭೀಕರ ಅಪಘಾತ: ಚಾಲಕ ಸ್ಥಳದಲ್ಲೇ ಸಾವು

ಬೆಂಗಳೂರು: ಬೆಳ್ಳಂ ಬೆಳಿಗ್ಗೆ ಬೆಂಗಳೂರು-ಮೈಸೂರು ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಚಾಲಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್ ಬಳಿ ಈ ದುರಂತ ಸಂಭವಿಸಿದೆ. ಈಚರ್ ಲಾರಿ ವೇಗವಾಗಿ ಬಂದು ಸರಣಿ ಅಪಗಹತ ಮಾಡಿದ್ದು, ಬಳಿಕ ಸಿಗ್ನಲ್ ಬಳಿ ನಿಂತಿದ್ದ ಮತ್ತೊಂದು ಲಾರಿಗೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪರಿಣಾಮ ಲಾರಿ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ಚಾಲಕನನ್ನು ವಿಜಯ್ ಎಂದು ಗುರುತಿಸಲಾಗಿದೆ. ಕೆ.ಆರ್. ಮಾರ್ಕೆಟ್‌ನಿಂದ ಮೈಸೂರು ರಸ್ತೆಗೆ ಬರುವ ಮಾರ್ಗದಲ್ಲಿ ಈ ಘಟನೆ ನಡೆದಿದೆ.

ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತಕ್ಕೀಡಾದ ಲಾರಿಗಳಲ್ಲಿ ಒಂದು ತರಕಾರಿ ಸಾಗಿಸುತ್ತಿತ್ತು ಎಂದು ತಿಳಿದುಬಂದಿದೆ. ಘಟನೆಯ ತೀವ್ರತೆಯಿಂದಾಗಿ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆಯುಂಟಾಗಿದೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಲು ಕ್ರಮ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular