HomeKarnatakaನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ ನಗರದ ನಾಗರಿಕರು ಯಾರಾದರೂ ನಾಪತ್ತೆಯಾಗಿದ್ದರೆ ಅಥವಾ ಸಂಪರ್ಕಕ್ಕೆ ಸಿಗದೇ ಇದ್ದಲ್ಲಿ, ತಕ್ಷಣವೇ ಅವರ ವಿವರಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರವು ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಕೇಂದ್ರ ಗೃಹ ಸಚಿವಾಲಯ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ರಾಜ್ಯ ಸರ್ಕಾರವು ಸತತ ಸಂಪರ್ಕದಲ್ಲಿದ್ದು, ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ನೆರವು ನೀಡಲು ಮತ್ತು ನಾಪತ್ತೆಯಾದವರನ್ನು ಪತ್ತೆಹಚ್ಚಲು ಕ್ರಮ ಕೈಗೊಳ್ಳುತ್ತಿದೆ. ನೇಪಾಳದಲ್ಲಿ ನಿಮ್ಮ ಕುಟುಂಬಸ್ಥರು, ಸ್ನೇಹಿತರು ಅಥವಾ ಪರಿಚಿತರು ನಾಪತ್ತೆಯಾಗಿದ್ದಾರೆಂದು ಶಂಕಿಸಲಾಗಿದ್ದರೆ, ಸಾರ್ವಜನಿಕರು ನಾಪತ್ತೆಯಾದ ವ್ಯಕ್ತಿಯ ಪೂರ್ಣ ಹೆಸರು, ಮೊಬೈಲ್ ಸಂಖ್ಯೆ, ಮತ್ತು ಸಮಯ ಹಾಗೂ ಖಾಯಂ ವಿಳಾಸದ ವಿವರಗಳನ್ನು ಸರ್ಕಾರಕ್ಕೆ ತಕ್ಷಣವೇ ಒದಗಿಸಲು ಕೋರಲಾಗಿದೆ.

ಸಂತ್ರಸ್ತರು ಮತ್ತು ಅವರ ಕುಟುಂಬಸ್ಥರ ನೆರವಿಗಾಗಿ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) 24×7 ಸಹಾಯವಾಣಿ ತೆರೆದಿದ್ದು, ಸಾರ್ವಜನಿಕರು 1070 (ಟೋಲ್ ಫ್ರೀ) ಅಥವಾ 080-22253707 ಸಂಖ್ಯೆಗೆ ಕರೆ ಮಾಡಬಹುದು. ಇಮೇಲ್ ಮೂಲಕ ಮಾಹಿತಿ ನೀಡಲು [email protected] ವಿಳಾಸಕ್ಕೆ ಕಳುಹಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿತ್ರಕೃಪೆ: ಎಐ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular