HomeKarnatakaರಾಜ್ಯದ ಯಾವುದೇ ಭಾಗದಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ: ಕೆ.ಜೆ. ಜಾರ್ಜ್

ರಾಜ್ಯದ ಯಾವುದೇ ಭಾಗದಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ: ಕೆ.ಜೆ. ಜಾರ್ಜ್

ಬೆಂಗಳೂರು: ರಾಜ್ಯದ ಯಾವುದೇ ಭಾಗದಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.

ನವೀಕರಿಸಬಹುದಾದ ಇಂಧನ ಶೃಂಗಸಭೆ ಅಂಗವಾಗಿ ಆಯೋಜಿಸಿದ್ದ ರೋಡ್ ಶೋನಲ್ಲಿ ಭಾಗವಹಿಸಿದ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಸಮರ್ಪಕ ವಿದ್ಯುತ್ ಪೂರೈಕೆಗೆ 400 ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆ ಮಾಡಲಾಗಿದೆ. ಯಾವ ಭಾಗದಲ್ಲಿಯೂ ಲೋಡ್ ಶೆಡ್ಡಿಂಗ್ ಮಾಡುತ್ತಿಲ್ಲ. ವಿದ್ಯುತ್ ಬೇಡಿಕೆ ಹೆಚ್ಚುತ್ತಿರುವುದರಿಂದ ವಿದ್ಯುತ್ ಖರೀದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿನಿಮಯ ವ್ಯವಸ್ಥೆಯ ಮೂಲಕ ಹರಿಯಾಣ, ಪಂಜಾಬ್, ಉತ್ತರ ಪ್ರದೇಶ ಸೇರಿ ಹಲವು ರಾಜ್ಯಗಳಿಂದ ಈ ಹಿಂದೆ ಪಡೆದಿದ್ದ ವಿದ್ಯುತ್ ಅನ್ನು ವಾಪಸ್ ನೀಡಲಾಗಿದೆ. ಮತ್ತೆ ಅದೇ ರೂಪದಲ್ಲಿ ವಿದ್ಯುತ್ ಪಡೆಯಲು ಪ್ರಯತ್ನ ನಡೆಸಲಾಗುವುದು. ಒಂದು ವೇಳೆ ಆ ರೀತಿ ವಿದ್ಯುತ್ ಸಿಗದಿದ್ದಲ್ಲಿ ಬೇರೆ ಕಡೆಯಿಂದ ಖರೀದಿ ಮಾಡಿ ಪೂರೈಕೆ ಮಾಡಲಾಗುವುದು ಎಂದು ಹೇಳಿದ್ದಾರೆ.

ರೈತರ ಕೃಷಿ ಪಂಪ್ಸೆಟ್ ಗಳಿಗೆ ನಿತ್ಯ 7 ಗಂಟೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. 10 HP ಒಳಗಿನ ನೀರಾವರಿ ಪಂಪ್ ಸೆಟ್ ಗಳಿಗೆ ಉಚಿತವಾಗಿ ವಿದ್ಯುತ್ ನೀಡಲು ವಾರ್ಷಿಕ 24,000 ಕೋಟಿ ರೂಪಾಯಿ ಸಹಾಯಧನ ನೀಡುತ್ತಿದ್ದು, ಮೂಲ ಸೌಕರ್ಯ ಸುಧಾರಣೆಗೆ ಕೂಡ ಒತ್ತು ನೀಡಲಾಗಿದೆ ಎಂದು ಹೇಳಿದ್ದಾರೆ.

ಇನ್ನು ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ವಿದ್ಯುತ್ ಬೇಡಿಕೆ ಹೆಚ್ಚಾಗಿದ್ದು, ರಾಜ್ಯದಲ್ಲಿ ಸೋಮವಾರ 340 ದಶಲಕ್ಷ ಯೂನಿಟ್ ವಿದ್ಯುತ್ ಬಳಕೆಯಾಗಿದೆ. ಇದು ಸೆಪ್ಟೆಂಬರ್ ತಿಂಗಳಲ್ಲಿ ದಾಖಲಾದ ಅತಿ ಹೆಚ್ಚು ವಿದ್ಯುತ್ ಬಳಕೆ ಪ್ರಮಾಣವಾಗಿದೆ ಎಂದು ಹೇಳಲಾಗಿದೆ.

ಸೂಕ್ಷ್ಮ ನೀರಾವರಿಗೆ ಸಹಾಯಧನ: ಅರ್ಹ ರೈತರಿಂದ ಅರ್ಜಿ ಆಹ್ವಾನ

ಶಿವಮೊಗ್ಗ: 2026-27 ನೇ ಸಾಲಿನ ‘ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ’ಯಡಿ ತೋಟಗಾರಿಕೆ ಬೆಳೆಗಳಲ್ಲಿ ನೀರಿನ ಬಳಕೆಯ ದಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ, ‘ಪ್ರತಿ ಹನಿಗೆ ಅಧಿಕ ಬೆಳೆ’ ಕಾರ್ಯಕ್ರಮದ ಮೂಲಕ ಹನಿ ಹಾಗೂ ತುಂತುರು ನೀರಾವರಿ ಪದ್ಧತಿ ಅಳವಡಿಸಿಕೊಳ್ಳಲು ಸಹಾಯಧನ ನೀಡಲಾಗುತ್ತಿದೆ.

ಸಹಾಯಧನದ ವಿವರ: 5ಎಕರೆವರೆಗಿನ ಪ್ರದೇಶಕ್ಕೆ ಶೇಕಡಾ 90 ರಷ್ಟು ಹಾಗೂ 5 ಎಕರೆ ಮೇಲ್ಪಟ್ಟ ಪ್ರದೇಶಕ್ಕೆ ಶೇಕಡಾ 45 ರ ದರದಲ್ಲಿ ಗರಿಷ್ಠ12.50 ಎಕರೆ ಪ್ರದೇಶದವರೆಗೆ ಸಹಾಯಧನ ನೀಡಲಾಗುವುದು.

 ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಎಲ್ಲಾ ವರ್ಗಗಳ ಆಸಕ್ತ ರೈತರು ಈ ಸೌಲಭ್ಯವನ್ನು ಪಡೆಯಬಹುದು.

ಮರು ಅಳವಡಿಕೆಗೆ ಅವಕಾಶ: ಈಗಾಗಲೇ 7 ವರ್ಷಗಳ ಹಿಂದೆ ಸೂಕ್ಷ್ಮ ನೀರಾವರಿ ಪದ್ಧತಿಯನ್ನು ಅಳವಡಿಸಿಕೊಂಡು ಸಹಾಯಧನ ಪಡೆದಿದ್ದು, ಪ್ರಸ್ತುತ ಉಪಕರಣಗಳು ಹಾಳಾಗಿದ್ದರೆ ಅಂತಹ ರೈತರು ಸಹ ಪುನಃ ಸಹಾಯಧನ ಪಡೆಯಲು ಅರ್ಹರಿರುತ್ತಾರೆ.

ಸಹಾಯಧನವನ್ನು ಯೋಜನೆಯ ಮಾರ್ಗಸೂಚಿ, ಅನುದಾನದ ಲಭ್ಯತೆ ಹಾಗೂ ಜೇಷ್ಠತೆಯ ಆಧಾರದ ಮೇಲೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹೋಬಳಿ ಅಥವಾ ತಾಲೂಕು ಮಟ್ಟದ ತೋಟಗಾರಿಕಾ ಕಚೇರಿಯನ್ನು ಸಂಪರ್ಕಿಸಬಹುದೆಂದು‌ ತೋಟಗಾರಿಕೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular