HomeKarnatakaಪಾಗಲ್ ಪ್ರೇಮಿಯ ಕಾಟಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ

ಪಾಗಲ್ ಪ್ರೇಮಿಯ ಕಾಟಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಪಾಗಲ್ ಪ್ರೇಮಿಯ ಕಾಟಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕವಿತಾ(21) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ.

ಮನೆಯಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದಿರಾ ನಗರದ ಲಕ್ಷ್ಮಿಪುರಂ ಬಡಾವಣೆಯಲ್ಲಿ ಘಟನೆ ನಡೆದಿದೆ. ಪೊಲೀಸ್ ತನಿಖೆಯ ವೇಳೆ ಪಾಗಲ್ ಪ್ರೇಮಿಯ ಕಾಟ ಬೆಳಕಿಗೆ ಬಂದಿದೆ. ಆರೋಪಿ ಕಿರಣ್ ನನ್ನು ಇಂದಿರಾ ನಗರ ಠಾಣೆ ಪೋಲಿಸರು ಬಂಧಿಸಿದ್ದಾರೆ.

ಕವಿತಾ ಅವರಿಗೆ ಸಂಬಂಧಿಕ ರಾಜು ಜೊತೆಗೆ ಮದುವೆ ಮಾಡಲಾಗಿತ್ತು. 2024ರ ಮೇ ತಿಂಗಳಲ್ಲಿ ರಾಜು ಜೊತೆಗೆ ಕವಿತಾ ಮದುವೆ ನಡೆದಿದ್ದು, ಕವಿತಾ ಮತ್ತು ರಾಜು ದಂಪತಿಗೆ ಒಂದೂವರೆ ವರ್ಷದ ಮಗುವಿದೆ. ಆಗಸ್ಟ್ 6ರಂದು ನೇಣು ಹಾಕಿಕೊಂಡು ಕವಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನಿಖೆಯ ವೇಳೆ ಕಿರಣ್ ನಿಂದ ಆತ್ಮಹತ್ಯೆ ಪ್ರಚೋದನೆ ಬೆಳಕಿಗೆ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೂರು ವರ್ಷದ ಹಿಂದೆ ಪ್ರೀತಿಸುವುದಾಗಿ ಕಿರಣ್ ಎಂಬಾತ ಕವಿತಾ ಹಿಂದೆ ಬಿದ್ದಿದ್ದ. ಆರೋಪಿ ಕಿರಣ್ ಗೆ ಕವಿತಾ ಪೋಷಕರು ಬುದ್ಧಿವಾದ ಹೇಳಿದ್ದರು. ನಂತರ 2024ರಲ್ಲಿ ರಾಜು ಜೊತೆಗೆ ಕವಿತಾ ಮದುವೆ ಮಾಡಿದ್ದರು. ಇತ್ತೀಚಿಗೆ ಮತ್ತೆ ಕವಿತಾ ಅವರಿಗೆ ಕಾಟ ಕೊಡಲು ಕಿರಣ್ ಶುರು ಮಾಡಿದ್ದ. ನೀನು ನನಗೆ ಮೆಸೇಜ್ ಮಾಡದಿದ್ದರೆ ಸಾಯುವುದಾಗಿ ಬೆದರಿಕೆ ಹಾಕಿದ್ದ. ನನ್ನ ನೆಮ್ಮದಿ ಹಾಳು ಮಾಡಿದೆ, ನಿನ್ನ ಜೀವನ ಹಾಳು ಮಾಡುತ್ತೇನೆ ಎಂದು ಹೇಳಿ ಕವಿತಾಗೆ ಮೆಸೇಜ್ ಮಾಡಿ ಕಿರಣ್ ಕಾಟ ಕೊಡುತ್ತಿದ್ದ. ಈ ವಿಚಾರವನ್ನು ಕವಿತಾ ಪೋಷಕರಿಗೆ ಪತಿ ರಾಜು ಹೇಳಿದ್ದರು. ಗಂಡ ಮನೆಯವರಿಗೆ ವಿಷಯ ಗೊತ್ತಾಯಿತು ಎಂದು ಕವಿತಾ ನೊಂದುಕೊಂಡಿದ್ದರು. ಮೊಬೈಲ್ ಪರಿಶೀಲನೆಯ ವೇಳೆ ಕವಿತಾಗೆ ಕಿರಣ್ ಕಾಟ ಕೊಟ್ಟಿದ್ದು ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಕಿರಣ್ ನನ್ನು ಬಂಧಿಸಿದ್ದಾರೆ.

ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

(ಹಕ್ಕುತ್ಯಾಗ: ಈ ಲೇಖನವು ಯಾವುದೇ ರೂಪದಲ್ಲಿ ಸ್ವಯಂ-ಹಾನಿ ಅಥವಾ ಆತ್ಮಹತ್ಯೆಯನ್ನು ಉತ್ತೇಜಿಸಲು, ಪ್ರೋತ್ಸಾಹಿಸಲು ಅಥವಾ ಸಂವೇದನಾಶೀಲಗೊಳಿಸಲು ಉದ್ದೇಶಿಸಿಲ್ಲ. ನೀವು ಅಥವಾ ನಿಮಗೆ ತಿಳಿದಿರುವ ಯಾರಾದರೂ ಭಾವನಾತ್ಮಕ ಯಾತನೆ, ಆತ್ಮಹತ್ಯಾ ಆಲೋಚನೆಗಳು ಅಥವಾ ಮಾನಸಿಕ ಆರೋಗ್ಯ ಬಿಕ್ಕಟ್ಟನ್ನು ಅನುಭವಿಸುತ್ತಿದ್ದರೆ, ದಯವಿಟ್ಟು ತಕ್ಷಣದ ವೃತ್ತಿಪರ ಸಹಾಯವನ್ನು ಪಡೆಯಿರಿ. ಭಾರತದಲ್ಲಿ, ನೀವು AASRA (24/7) ಅನ್ನು ಸಂಪರ್ಕಿಸಬಹುದು: 91-9820466726 ಅಥವಾ ವಿಶ್ವಾಸಾರ್ಹ ಮಾನಸಿಕ ಆರೋಗ್ಯ ವೃತ್ತಿಪರರು, ವೈದ್ಯರು ಅಥವಾ ಸ್ಥಳೀಯ ತುರ್ತು ಸೇವೆಗಳನ್ನು ಸಂಪರ್ಕಿಸಬಹುದು.)

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular