HomeKarnatakaBREAKING: ವಿಧಾನಸಭೆಯಲ್ಲಿ ಬೆಂಗಳೂರು ಅರಮನೆ ಭೂ ಬಳಕೆ, ನಿಯಂತ್ರಣ ವಿಧೇಯಕ ಅಂಗೀಕಾರ

BREAKING: ವಿಧಾನಸಭೆಯಲ್ಲಿ ಬೆಂಗಳೂರು ಅರಮನೆ ಭೂ ಬಳಕೆ, ನಿಯಂತ್ರಣ ವಿಧೇಯಕ ಅಂಗೀಕಾರ

ಬೆಂಗಳೂರು: ಬೆಂಗಳೂರು ಅರಮನೆ ಭೂಬಳಕೆ, ನಿಯಂತ್ರಣ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ.  ವಿಧೇಯಕದ ಕುರಿತಾಗಿ ಸದನದಲ್ಲಿ ಆಡಳಿತ ಪಕ್ಷ, ವಿಪಕ್ಷದ ಸದಸ್ಯರ ನಡುವೆ ಜಟಾಪಟಿ ನಡೆದಿದೆ.

ರಾಜಕೀಯ ದ್ವೇಷಕ್ಕಾಗಿ ವಿಧೇಯಕ ತಂದಿದ್ದಾರೆ ಎಂದು ಬಿಜೆಪಿ ಸದಸ್ಯ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಸರ್ಕಾರಕ್ಕೆ ಚಾಮುಂಡೇಶ್ವರಿ ಶಾಪ ತಟ್ಟುತ್ತದೆ ಎಂದು ವಿಪಕ್ಷ ಉಪನಾಯಕ ಬೆಲ್ಲದ್ ಹೇಳಿದ್ದಾರೆ. ಸದನದಲ್ಲಿ ವಿಧೇಯಕದ ವಿರುದ್ಧ ಬಿಜೆಪಿ ಅಭಿಪ್ರಾಯ ತೋರ್ಪಡಿಸಿದೆ.

ಬಳ್ಳಾರಿ ಮತ್ತು ಜಯಮಹಲ್ ರಸ್ತೆ ಅಗಲೀಕರಣಕ್ಕಾಗಿ ಬೆಂಗಳೂರು ಅರಮನೆ ಮೈದಾನದ 15.39 ಎಕರೆ ಜಾಗ ಸ್ವಾಧೀನಕ್ಕೆ ಬದಲಾಗಿ ಮೈಸೂರು ರಾಜಮನೆತನದ ವಾರಸುದಾರರಿಗೆ 3014 ಕೋಟಿ ರೂ. ವರ್ಗಾವಣೆ ಅಭಿವೃದ್ಧಿ ಹಕ್ಕುಗಳನ್ನು(ಟಿಡಿಆರ್) ಪರಿಹಾರ ನೀಡಬೇಕೆಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿನ್ನೆಲೆಯಲ್ಲಿ ಸರ್ಕಾರ ಅರಮನೆ ಮೈದಾನದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವ ಉದ್ದೇಶದ ಬೆಂಗಳೂರು ಅರಮನೆ ಭೂ ಬಳಕೆ ಮತ್ತು ನಿಯಂತ್ರಣ ಮಸೂದೆ ಮಂಡಿಸಿ ಅಂಗೀಕಾರ ಪಡೆದುಕೊಂಡಿದೆ.

ಸುಪ್ರೀಂ ಕೋರ್ಟ್ ಆದೇಶ ಪಾಲನೆ ಮಾಡಿದಲ್ಲಿ ಸರ್ಕಾರಕ್ಕೆ ಭಾರಿ ನಷ್ಟ ಉಂಟಾಗುತ್ತದೆ ಎನ್ನುವ ಕಾರಣಕ್ಕೆ ಸರ್ಕಾರ ಸುಗ್ರೀವಾಜ್ಞೆ ಜಾರಿ ಮಾಡಿತ್ತು. ಆದರೆ ಸುಪ್ರೀಂ ಕೋರ್ಟ್ ಅದನ್ನು ಒಪ್ಪದೇ ಟಿಡಿಆರ್ ಪರಿಹಾರ ನೀಡುವ ಆದೇಶ ಪಾಲಿಸಲು ಸೂಚಿಸಿತ್ತು. ಇದರ ನಡುವೆಯೂ ಸುಗ್ರೀವಾಜ್ಞೆಗೆ ಕಾನೂನು ರೂಪ ಕೊಡಲು ಸರ್ಕಾರ ವಿಧೇಯಕ ಮಂಡಿಸಿ ಅಂಗೀಕಾರ ಪಡೆದುಕೊಂಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular