HomeKarnatakaಬೆಂಗಳೂರಿನಲ್ಲಿ ಯುವತಿ ಮೇಲೆ ಪೆಪ್ಪರ್ ಸ್ಪ್ರ್ರ‍ೇ ಮಾಡಿ ಪ್ರಜ್ಞೆ ತಪ್ಪಿಸಿ ವೈದ್ಯನಿಂದ ಅತ್ಯಾಚಾರ: ವಿಡಿಯೋ ಮಾಡಿಟ್ಟುಕೊಂಡು...

ಬೆಂಗಳೂರಿನಲ್ಲಿ ಯುವತಿ ಮೇಲೆ ಪೆಪ್ಪರ್ ಸ್ಪ್ರ್ರ‍ೇ ಮಾಡಿ ಪ್ರಜ್ಞೆ ತಪ್ಪಿಸಿ ವೈದ್ಯನಿಂದ ಅತ್ಯಾಚಾರ: ವಿಡಿಯೋ ಮಾಡಿಟ್ಟುಕೊಂಡು ಬ್ಲ್ಯಾಕ್ ಮೇಲ್

ಬೆಂಗಳೂರು: ಬೆಂಗಳೂರಿನಲ್ಲಿ ಕಾಮುಕ ವೈದ್ಯನೊಬ್ಬ ಯುವತಿ ಮೇಲೆ ಪೆಪ್ಪರ್ ಸ್ಪ್ರೇ ಮಾಡಿ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ವೆಸಗಿದ್ದು, ಕೃತ್ಯದ ವಿಡಿಯೋ ಮಾಡಿಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಅತ್ಯಾಚಾರ ಹಾಗೂ ನಿರಂತರ ಬ್ಲ್ಯಾಕ್ ಮೇಲ್ ಪ್ರಕರಣದ ಹಿನ್ನೆಲೆಯಲ್ಲಿ ವಿಖ್ಯಾತ್ ಡಯಾಗ್ನೋಸ್ಟಿಕ್ ವೈದ್ಯ ಡಾ.ಯುವರಾಜ್ ಮನೋಹರ್ ವಿರುದ್ಧ ಯುವತಿ ನೀಡಿದ ದೂರಿನ ಮೇರೆಗೆ ಕೋಡಿಗೆಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಯಾಗ್ನೋಸ್ಟಿಕ್ ಸೆಂಟರ್ ನಲ್ಲಿ ನರ್ಸ್ ಆಗಿದ್ದ ಯುವತಿಯನ್ನು ಕಚೇರಿಯಲ್ಲಿ ಫೈಲ್ ಹುಡುಕುವ ನೆಪದಲ್ಲಿ ಕಾಮುಕ ವೈದ್ಯ ಕರೆದಿದ್ದಾನೆ. ಈ ವೇಳೆ ಯುವತಿ ಮೇಲೆ ಪೆಪ್ಪರ್ ಸ್ಪ್ರೇ ಮಾಡಿ, ಯುವತಿಯ ಪ್ರಜ್ಞೆ ತಪ್ಪಿಸಿ ಅತ್ಯಾಚಾರವೆಸಗಿದ್ದಾನೆ.

ಯುವತಿಯ ಬೆತ್ತಲೆ ವಿಡಿಯೋ ಮಾಡಿಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿದ್ದಾನೆ. ಕಳೆದ ಒಂದು ವರ್ಷದಿಂದ ಯುವತಿ ಇದ್ದ ಬಾಡಿಗೆ ಮನೆಗೆ ಬಂದು ವೈದ್ಯ ಯುವರಾಜ್ ಮನೋಹರ್ ಬ್ಲ್ಯಾಕ್ ಮೇಲ್ ಮಾಡಿ ಪದೇ ಪದೇ ಅತ್ಯಾಚಾರವೆಸಗುತ್ತಿದ್ದ. ಆಕ್ಷೇಪ ವ್ಯಕ್ತಪಡಿಸಿದರೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಅಪ್ ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದ.

ಇತ್ತೀಚೆಗೆ ವೈದ್ಯ ಮನೋಹರ್ ತನ್ನ ತಾಯಿ ಮದುವೆಗೆ ಒಪ್ಪುತ್ತಿಲ್ಲ. ನೀನು ಕೀಳು ಜಾತಿಯವಳು. ನಿನ್ನನ್ನು ನಮ್ಮ ಮನೆಯಲ್ಲಿ ಹತ್ತಿರಕ್ಕೂ ಸೇರಿಸಲ್ಲ ಎಂದು ಮೋಸ ಮಾಡಿದ್ದಾನೆ. ವೈದ್ಯನ ಬ್ಲ್ಯಾಕ್ ಮೇಲ್, ಅತ್ಯಾಚಾರಕ್ಕೆ ಬೇಸತ್ತ ಯುವತಿ ಕೋಡಿಗೆಹಳ್ಲಿ ಠಾಣೆಯಲ್ಲಿ ದೂರು ನೀಡಿದ್ದಾರೆ.

ವೈದ್ಯನ ಜೊತೆಗಿನ ಫೋಟೋ, ಕೆಲ ದಾಖಲೆಗಳನ್ನು ನೀಡಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವೈದ್ಯ ಯುವರಾಜ್ ಮನೋಹರ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದು, ಆತನ ಬಂಧನಕ್ಕಾಗಿ ಹುಡುಕಾಟ ನಡೆಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ: ಗೂಡ್ಸ್ ವಾಹನಕ್ಕೆ ಓಮ್ನಿ ಕಾರು ಡಿಕ್ಕಿ: ಮೂವರು ಮಹಿಳೆಯರು ಸ್ಥಳದಲ್ಲೇ ದುರ್ಮರಣ

ಚಿಕ್ಕಬಳ್ಳಾಪುರ: ಗೂಡ್ಸ್ ವಾಹನ ಹಾಗೂ ಓಮ್ನಿ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಕೊತ್ತನೂರು ಗೇಟ್ ಬಳಿ ನಡೆದಿದೆ.

ಮಲ್ಲಿಕಾರ್ಜುನಪುರ ಗ್ರಾಮದ ಮೂವರು ಮಹಿಳೆಯರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮಲ್ಲಿಕಾರ್ಜುನಪುರದಿಂದ ಹುಜುಗೂರಿಗೆ ಬರುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಓಮ್ನಿ ಕಾರಿನಲ್ಲಿ ಹೂವು ಕಟಾವು ಮಾಡಲು ಮಹಿಳೆಯರು ಹೋಗುತ್ತಿದ್ದರು.

ಕೊತ್ತನೂರು ಗೇಟ್ ಬಳಿ ಓಮ್ನಿ ಕಾರಿಗೆ ಗೂಡ್ಸ್ ವಾಹನ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕಾರು ಪಲ್ಟಿಯಾಗಿ ಬಿದ್ದಿದೆ. ಅಪಘಾತದಲ್ಲಿ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. ಶಿಡ್ಲಘಟ್ಟ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ಸಾವು:

ರಾಜ್ಯದಲ್ಲಿ ಸಾಲು ಸಾಲು ಅಪಘಾತ ಸಂಭವಿಸಿದ್ದು, ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವೇನಲ್ಲಿ ಕಾರು ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ದೊಡ್ದಕಾರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿದ್ದ ಬೆಂಗಳೂರು ಮೂಲದ ನಲವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ದೇವೇಂದ್ರ ಕುಮಾರ್ (45), ಜಿಷ್ಣು (೧೫), ದೀಕ್ಷಿತಾ (20), ಶಾರದಾಬಾಯಿ (70) ಮೃತ ದುರ್ದೈವಿ. ಕಾರಿನಲ್ಲಿದ್ದ ಉಳಿದ ನಾಲ್ವರಿಗೆ ಗಂಭೀರ ಗಯಾಗಳಾಗಿವೆ. ಗಾಯಾಳುಗಳನ್ನು ಕೋಲಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಿರುಪತಿಯಿಂದ ಬೆಂಗಳೂರಿಗೆ ಹಿಂತಿರುಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular