HomeKarnatakaBREAKING: ಪಿಜಿ ಕಟ್ಟಡದ 7ನೇ ಮಹಡಿಯಿಂದ ಜಿಗಿದ ಪ್ರೇಮಿಗಳು: ಯುವತಿ ಸಾವು, ಯುವಕನ ಸ್ಥಿತಿ ಗಂಭೀರ

BREAKING: ಪಿಜಿ ಕಟ್ಟಡದ 7ನೇ ಮಹಡಿಯಿಂದ ಜಿಗಿದ ಪ್ರೇಮಿಗಳು: ಯುವತಿ ಸಾವು, ಯುವಕನ ಸ್ಥಿತಿ ಗಂಭೀರ

ಬೆಂಗಳೂರು: ಪಿಜಿ ಕಟ್ಟಡದ 7ನೇ ಮಹಡಿಯಿಂದ ಪ್ರೇಮಿಗಳಿಬ್ಬರು ಜಿಗಿದಿದ್ದು, ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಯುವಕನ ಸ್ಥಿತಿ ಗಂಭೀರವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿರುವ ಕೋ ಲಿವಿಂಗ್ ಪಿಜಿಯೊಂದರಲ್ಲಿ ಈ ಘಟನೆ ನಡೆದಿದೆ. ಪುದುಚೆರಿ ಮೂಲದ ಯುವತಿ ಜನನಿ ಮೃತ ದುರ್ದೈವಿ. ಮಾಣಿಕ್ಯ ವೇಲು ಗಂಭೀರವಾಗಿ ಗಾಯಗೊಂಡಿರುವ ಯುವಕ. ಗಾಯಾಳು ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಜನನಿ ಹಾಗೂ ಮಾಣಿಕ್ಯ ವೇಲು ಇಬ್ಬರು ವೃತ್ತಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಗಳಾಗಿದ್ದು, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ತಾವು ವಾಸವಾಗಿದ್ದ ಪಿಜಿ ಕಟ್ಟಡದ 7ನೇ ಮಹಡಿಯಿಂದ ಜಿಗಿದು ಇಬ್ಬರೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೆಳಗೆ ಬಿದ್ದ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದು, ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular