HomeKarnatakaBREAKING NEWS: ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ನಾಲ್ವರು ಕೇಂದ್ರದ GST ಅಧಿಕಾರಿಗಳ ಬಂಧನ

BREAKING NEWS: ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ನಾಲ್ವರು ಕೇಂದ್ರದ GST ಅಧಿಕಾರಿಗಳ ಬಂಧನ

ಬೆಂಗಳೂರು: ಬೆಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೇಂದ್ರದ ನಾಲ್ವರು ಜಿಎಸ್ ಟಿ ಅಧಿಕಾರಿಗಳನ್ನು ಬಂಧಿಸಿದ್ದಾರೆ.

ಉದ್ಯಮಿಯೊಬ್ಬರು ನೀಡಿದ ದೂರಿನ ಹಿನ್ನೆಲೆಯಲ್ಲಿ ಮಹಿಳಾ ಅಧಿಕಾರಿ ಸೇರಿದಂತೆ ನಾಲ್ವರು ಜಿಎಸ್ ಟಿ ಅಧಿಕಾರಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣವೊಂದನ್ನು ಮುಚ್ಚಿ ಹಾಕಲು ಬರೋಬ್ಬರಿ 1.50 ಕೋಟಿ ರೂಪಾಯಿ ಹಣ ಪಡೆದು ಅಧಿಕಾರಿಗಳು ಪರಾರಿಯಾಗಿದ್ದರು. ಈ ಬಗ್ಗೆ ಉದ್ಯಮಿಯೊಬ್ಬರು ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಬೆಂಗಳೂರು ನಗರ ಡಿಸಿಪಿ ದೇವರಾಜ್ ಟಿಂ ಕಾರ್ಯಾಚರಣೆ ನಡೆಸಿ ಇದೀಗ ಮಹಿಳಾ ಅಧಿಕಾರಿ ಸೇರಿದಂತೆ ಕೇಂದ್ರದ ನಾಲ್ವರು ಜಿಎಸ್ ಟಿ ಅಧಿಕಾರಿಗಳನ್ನು ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇಂದ್ರ ಗುಪ್ತದಳದ ಮಹಿಳಾ ಅಧಿಕಾರಿ ಸೋನಾಲಿ ಸಹಾಯಿ, ಸೀನಿಯರ್ ಇಂಟಲಿಜನ್ಸ್ ಆಫೀಸರ್ ಮನೋಜ್ ಸೈನಿ, ಅಧೀಕ್ಷಕ ಅಭಿಷೇಕ್, ಸಿನೀಯರ್ ಇಂಟಲಿಜನ್ಸ್ ಆಫೀಸರ್ ನಾಗೇಶ್ ಬಂಧಿತ ಅಧಿಕಾರಿಗಳು.

 

For Latest News Updates, Join Our Whatsapp Community🚩
RELATED ARTICLES

Most Popular