HomeKarnatakaಸಮಯ ಪ್ರಜ್ಞೆ ಮೆರೆದು ಸವಾರನ ಜೀವ ಉಳಿಸಿದ ಪೊಲೀಸ್ ಸಿಬ್ಬಂದಿ

ಸಮಯ ಪ್ರಜ್ಞೆ ಮೆರೆದು ಸವಾರನ ಜೀವ ಉಳಿಸಿದ ಪೊಲೀಸ್ ಸಿಬ್ಬಂದಿ

ಬೆಂಗಳೂರು: ಎದೆ ನೋವು ಕಾಣಿಸಿಕೊಂಡು ನಡು ರಸ್ತೆಯಲ್ಲಿ ಕುಸಿದು ಬಿದ್ದಿದ್ದ ವ್ಯಕ್ತಿಯನ್ನು ಸಿಪಿಆರ್ ಮಾಡಿ ಪೊಲೀಸರು ಜೀವ ಉಳಿಸಿದ್ದಾರೆ.

ರವಿ(34) ಅವರು ಶನಿವಾರ ಬೆಳಗ್ಗೆ 8:30ರ ಸುಮಾರಿಗೆ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಕೆಲಸಕ್ಕೆ ತೆರಳುತ್ತಿದ್ದಾಗ ಅಗ್ನಿಶಾಮಕ ಠಾಣೆಯ ಸಮೀಪ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರು ತಮ್ಮ ಸ್ಕೂಟರನ್ನು ರಸ್ತೆ ಬದಿ ನಿಲ್ಲಿಸಿ ಕುಸಿದುಬಿದ್ದಿದ್ದಾರೆ. ಅದೇ ರಸ್ತೆಯಲ್ಲಿ ಗಸ್ತಿನಲ್ಲಿದ್ದ ಹೊಯ್ಸಳ ಪೊಲೀಸ್ ಸಿಬ್ಬಂದಿ ಎಎಸ್ಐ ಸಚ್ಚಿದಾನಂದ ಮೂರ್ತಿ ಮತ್ತು ಕಾನ್ಸ್ ಟೇಬಲ್ ಬಸವರಾಜು ಅವರು ರವಿಯವರ ನೆರವಿಗೆ ಧಾವಿಸಿದ್ದಾರೆ.

ಕೂಡಲೇ ಸಿಪಿಆರ್ ಮಾಡಿ ಅವರ ಜೀವಗೊಳಿಸಿದ್ದಾರೆ. ಅವರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ರಸ್ತೆ ಬದಿ ಬಿದ್ದಿದ್ದ ರವಿಗೆ ಸಿಪಿಆರ್ ಮಾಡಿ ಪ್ರಾಣ ಉಳಿಸಿದ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಶ್ಲಾಘಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular