HomeKarnatakaಬೆಂಗಳೂರಿನಲ್ಲಿ ಪೊಲೀಸರ ದಿಢೀರ್ ದಾಳಿ: 71 ಬಾಲಕಾರ್ಮಿಕರ ರಕ್ಷಣೆ

ಬೆಂಗಳೂರಿನಲ್ಲಿ ಪೊಲೀಸರ ದಿಢೀರ್ ದಾಳಿ: 71 ಬಾಲಕಾರ್ಮಿಕರ ರಕ್ಷಣೆ

ನೆಲಮಂಗಲ: ಚಿಕ್ಕ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳುತ್ತಿರುವ ಬಗ್ಗೆ ನಿರಂತರ ದೂರು ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಪಶ್ಚಿಮ ವಿಭಾಗ ಹಾಗೂ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.

ಶ್ರಮಿಕರಾಗಿ ದುಡಿಯುತ್ತಿದ್ದ ಮಕ್ಕಳನ್ನು ರಕ್ಷಿಸಲು ಪೊಲೀಸರು ವಿವಿಧೆಡೆ ದಾಳಿ ನಡೆಸಿ 71ಕ್ಕೂ ಹೆಚ್ಚು ಬಾಲಕಾರ್ಮಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಾರ್ಮಿಕರನ್ನು ಕಾನೂನುಬಾಹಿರವಾಗಿ ಕೆಲಸಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂಬ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಡಿವೈಎಸ್ಪಿ ಉಮಾರಾಣಿ ಹಾಗೂ ಸಿಪಿಐ ನರೇಂದ್ರ ಬಾಬು ಅವರ ನೇತೃತ್ವದಲ್ಲಿ ಪೊಲೀಸರ ವಿಶೇಷ ತಂಡ ದಿಢೀರ್ ದಾಳಿ ನಡೆಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಾಳಿಯ ವೇಳೆ ಮಕ್ಕಳನ್ನು ಕಠಿಣ ಕೆಲಸಗಳಿಗೆ ಬಳಸಿಕೊಳ್ಳುತ್ತಿದ್ದುದು ಪತ್ತೆಯಾಗಿದೆ. ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಒಟ್ಟು 5 ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ರಕ್ಷಿಸಲ್ಪಟ್ಟ ಎಲ್ಲಾ ಮಕ್ಕಳನ್ನು ಮಕ್ಕಳ ಸಾಂತ್ವನ ಕೇಂದ್ರಕ್ಕೆ ರವಾನಿಸಲಾಗಿದೆ.

ಇನ್ನೊಂದೆಡೆ, ಬೆಂಗಳೂರು ಪಶ್ಚಿಮ ವಿಭಾಗದ ಪೊಲೀಸರು ಬಾಲಕಾರ್ಮಿಕ ಪದ್ಧತಿ ತಡೆಗಟ್ಟಲು ಬೃಹತ್ ಕಾರ್ಯಾಚರಣೆಯನ್ನು ಕೈಗೆತ್ತಿಕೊಂಡಿದ್ದಾರೆ. ವಿಭಾಗದಾದ್ಯಂತ ಒಟ್ಟು 917 ವ್ಯಾಪಾರ ಮಳಿಗೆಗಳು, ಗ್ಯಾರೇಜ್ ಹಾಗೂ ಸಣ್ಣ ಪ್ರಮಾಣದ ಉದ್ದಿಮೆಗಳ ಮೇಲೆ ದಾಳಿ ನಡೆಸಲಾಗಿದೆ. ಈ ಬೃಹತ್ ಕಾರ್ಯಾಚರಣೆಯಲ್ಲಿ ಒಟ್ಟು 71 ಬಾಲಕಾರ್ಮಿಕರನ್ನು ರಕ್ಷಿಸಲಾಗಿದೆ.

ಶಾಲಾ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡು ಶೋಷಣೆ ಮಾಡುತ್ತಿದ್ದ ಅಂಗಡಿಗಳು ಹಾಗೂ ಸಂಸ್ಥೆಗಳ ಮಾಲೀಕರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಸಂಪೂರ್ಣ ಸಿದ್ಧತೆ ನಡೆಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular