HomeKarnataka12 ವರ್ಷಗಳಿಂದ ಡ್ರಗ್ಸ್ ದಂಧೆ ನಡೆಸುತ್ತಿದ್ದ ನೈಜೀರಿಯಾ ಪ್ರಜೆ ಸೇರಿ ಐವರು ಅರೆಸ್ಟ್

12 ವರ್ಷಗಳಿಂದ ಡ್ರಗ್ಸ್ ದಂಧೆ ನಡೆಸುತ್ತಿದ್ದ ನೈಜೀರಿಯಾ ಪ್ರಜೆ ಸೇರಿ ಐವರು ಅರೆಸ್ಟ್

ಬೆಂಗಳೂರು: ಬೆಂಗಳೂರು ಪೊಲೀಸರು 12 ವರ್ಷಗಳಿಂದ ಡ್ರಗ್ಸ್ ದಂಧೆ ನಡೆಸುತ್ತಿದ್ದ ನೈಜೀರಿಯಾ ಪ್ರಜೆ ಸೇರಿ ಐವರು ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ.

ಕೋಟಿ ಕೋಟಿ ರೂಪಾಯಿ ಮೌಲ್ಯದ MDMA, ಎಲ್​ಎಸ್​ಡಿ, ಗಾಂಜಾ ಸೇರಿದಂತೆ ವಿವಿಧ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಕೆಲ ಅರೋಪಿಗಳಿಗಾಗಿ ಖಾಕಿ ಶೋಧ ಮುಂದುವರಿದಿದ್ದು, ತನಿಖೆ ನಡೆಯುತ್ತಿದೆ.

ಭಾರತೀಯ ಮಹಿಳೆಯನ್ನು ಮದುವೆಯಾಗಿ 12 ವರ್ಷಗಳಿಂದ ಡ್ರಗ್ಸ್​ ಪೆಡ್ಲಿಂಗ್ ನಡೆಸುತ್ತಿದ್ದ ನೈಜೀರಿಯಾ ಪ್ರಜೆ ಇಮ್ಯಾನ್ಯುಯಲ್​​ ಎಂಬಾತನನ್ನು ಬೆಂಗಳೂರಿನ ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2014ರಲ್ಲಿ ಬ್ಯುಸಿನೆಸ್ ವೀಸಾದಡಿ ಭಾರತಕ್ಕೆ ಬಂದಿದ್ದ ಇಮ್ಯಾನ್ಯುಯಲ್, ಬೆಂಗಳೂರಿಗೆ ಬಂದು ಇಲ್ಲಿಯ ಮಹಿಳೆಯನ್ನೇ ಮದುವೆ ಕೂಡ ಆಗಿದ್ದ. 4-5 ಮನೆಗಳನ್ನು ಬಾಡಿಗೆ ಪಡೆದು ಡ್ರಗ್ ಪೆಡ್ಲಿಂಗ್ ನಡೆಸ್ತಿದ್ದ ಈತ, ಹೊರ ರಾಜ್ಯ ಮತ್ತು ಹೊರ ದೇಶಗಳಿಂದ ಸಬ್ ಪೆಡ್ಲರ್ಸ್​ಗಳಿಗೆ ಡ್ರಗ್ ಮಾರಾಟ ಮಾಡ್ತಿದ್ದ. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ್ದ ಹೆಬ್ಬಗೋಡಿ ಪೊಲೀಸರು, ಆರೋಪಿಯನ್ನು ಬಂಧಿಸಿ MDMA, ಎಲ್​ಎಸ್​ಡಿ, ವಿವಿಧ ಮಾದರಿಯ ಸಿಂಥೆಟಿಕ್ ಡ್ರಗ್ಸ್ ಸೇರಿ 14 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ಸೀಜ್​ ಮಾಡಿದ್ದಾರೆ. ಡ್ರಗ್ಸ್​ ಸೀಜ್ ಪ್ರಕರಣದಲ್ಲಿ ಇನ್ನುಳಿದವರಿಗಾಗಿ ಶೋಧ ಮುಂದುವರಿದಿದೆ.

ಇನ್ನು ಯಲಹಂಕ ಉಪನಗರ ಪೊಲೀಸರು ಗಾಂಜಾ ಪೆಡ್ಲರ್​ಗಳಾದ ಕೇರಳದ ಆದೇಶ್(19), ಮೊಹಮ್ಮದ್​​​ ನಿಶಾದ್(24) ಎಂಬವರನ್ನು ಬಂಧಿಸಿದ್ದಾರೆ. ಮೂರು ವರ್ಷದ ಹಿಂದೆ ಬೆಂಗಳೂರಿಗೆ ಬಂದಿದ್ದ ಆರೋಪಿಗಳು, ಒಡಿಶಾದಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಬಂಧಿತರಿಂದ 10 ಲಕ್ಷ 50 ಸಾವಿರ ಮೌಲ್ಯದ 21 ಕೆಜಿ ತೂಕದ ಗಾಂಜಾ ಜಪ್ತಿ ಮಾಡಲಾಗಿದ್ದು, ಸದ್ಯ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಲಾಗಿದೆ.

ಡೆಲಿವರಿ ಬಾಯ್, ಆಟೋ ಡ್ರೈವಿಂಗ್ ನೆಪದಲ್ಲಿ ಗಾಂಜಾ ಪೆಡ್ಲಿಂಗ್ ಮಾಡುತ್ತಿದ್ದ ಆರೋಪಿಗಳನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ. ರಾಹುಲ್​​ ಮತ್ತು ಪ್ರೇಮ್​​ ಬಂಧಿತರಾಗಿದ್ದು, ಇವರು ತಮಿಳುನಾಡಿನಿಂದ ಗಾಂಜಾ ತರಿಸಿ ಮಾರಾಟ ಮಾಡುತ್ತಿದ್ದರು. ರಾಹುಲ್ ಡೆಲಿವರಿ ಬಾಯ್ ಆಗಿದ್ರೆ, ಪ್ರೇಮ್ ಆಟೋ ಡ್ರೈವರ್ ಆಗಿದ್ದ. ಬಂಧಿತರಿಂದ 3 ಲಕ್ಷ ಮೌಲ್ಯದ 7 ಕೆಜಿ 500 ಗ್ರಾಂ ಗಾಂಜಾ ಸೀಜ್‌ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular