BREAKING NEWS: ಅಂಚೆ ಕಚೇರಿ, ಕೊರಿಯರ್ ಆಫೀಸ್ ಗಳ ಮೇಲೆ CCB ಪೊಲೀಸ್ ದಿಢೀರ್ ದಾಳಿ

ಬೆಂಗಳೂರು: ಬೆಂಗಳೂರಿನ ವಿವಿಧ ಪೋಸ್ಟ್ ಆಫೀಸ್, ಕೊರಿಯರ್ ಕಚೇರಿಗಳ ಮೇಲೆ ಸಿಸಿಬಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.

ಬೆಂಗಳೂರಿನ 7 ಕಡೆಗಳಲ್ಲಿ ಕೊರಿಯರ್ ಕಚೇರಿ, ಅಂಚೆ ಕಚೇರಿಗಳ ಮೇಲೆ ದಾಳಿ ನಡೆಸಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಚಂದ್ರಗುಪ್ತ ಮಾಹಿತಿ ನೀಡಿದ್ದು, ಹೊಸ ವರ್ಷಾಚರಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪೋಸ್ಟ್ ಆಫೀಸ್, ಕೊರಿಯರ್ ಮೂಲಕ ಡ್ರಗ್ಸ್ ಸರಬರಾಜು ಮಾಡಲಾಗುತ್ತಿರುವ ಬಗ್ಗೆ ಮಾಹಿತಿ ಬಂದಿದೆ. ತಪ್ಪು ವಿಳಾಸ ಕೊಟ್ಟು ಕೊರಿಯರ್ ಗಳಲ್ಲಿ ಸರಬರಾಜು ಮಾಡುತ್ತಿದ್ದಾರೆ. ಆ ನಿಟ್ಟಿನಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read