HomeLatest NewsBIG NEWS: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಬೆಳಿಗ್ಗೆ 10 ಗಂಟೆಯಿಂದ ವಿದ್ಯುತ್ ವ್ಯತ್ಯಯ

BIG NEWS: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಬೆಳಿಗ್ಗೆ 10 ಗಂಟೆಯಿಂದ ವಿದ್ಯುತ್ ವ್ಯತ್ಯಯ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳುರಿನಲ್ಲಿ ಇತ್ತೀಚಿನ ದಿನಗಳಲ್ಲಿ ಭಾರಿ ವಿದ್ಯುತ್ ವ್ಯತ್ಯಯವುಂಟಾಗುತ್ತಿದೆ. ಬೆಸ್ಕಾಂ ನಿಂದ ಕಾಮಗಾರಿ ಹಿನ್ನೆಲೆಯಲ್ಲಿ ಇಂದು ಕೂಡ ಹಲವೆಡೆ ವಿದ್ಯುತ್ ಸ್ಥಗಿತಗೊಳ್ಳಲಿದೆ.

ಬೆಸ್ಕಾಂನಿಂದ ಚಳ್ಳಕೆರೆ ವಿಭಾಗ ವ್ಯಾಪ್ತಿಯಲ್ಲಿ ಕಾಮಗಾರಿ ಹಿನ್ನೆಲೆಯಲ್ಲಿ ಡಿ.28ರಂದು ಪವರ್ ಕಟ್ ಮಾಡಲಾಗಿತ್ತು. ಇಂದೂ ಸಹ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬೆಳಗ್ಗೆ 10ರಿಂದ ಸಂಜೆ 5 ಗಂಟೆಯ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಸ್ಕಾಂನಿಂದ ಚಳ್ಳಕೆರೆ ವಿಭಾಗ ವ್ಯಾಪ್ತಿಯಲ್ಲಿ ಮೂರು ತಿಂಗಳ ಕಾಲ ದುರಸ್ತಿ ಕಾರ್ಯ ನಡೆಯುತ್ತಿರುವುದರಿಂದ ಇಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.

ಚಳ್ಳಕೆರೆ ವಿಭಾಗ ವ್ಯಾಪ್ತಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 5ರ ತನಕ ವಿದ್ಯುತ್‌ ಸ್ಥಗಿತವಾಗಲಿದ್ದು, ಸಾರ್ವಜನಿಕರು ಸಹಕಾರ ನೀಡುವಂತೆ ಎಇಇ ಜಿ.ಶಿವಪ್ರಸಾದ್ ಮನವಿ ಮಾಡಿದ್ದಾರೆ. ಇಂದು ಸಾಣಿಕೆರೆ, ಸೋಮಗುದ್ದು, ಗೋಪನಹಳ್ಳಿ, ಸಾಣಿಕೆರೆ ಶಾಖೆವ್ಯಾಪ್ತಿಯ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular