HomeKarnatakaರಾಜ್ಯಾದ್ಯಂತ ಮುಂದುವರೆಯಲಿದೆ ಮಳೆ: ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯಾದ್ಯಂತ ಮುಂದುವರೆಯಲಿದೆ ಮಳೆ: ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಇನ್ನೂ ಒಂದು ವಾರ ಬೆಂಗಳೂರು ಸೇರಿ ರಾಜ್ಯಾದ್ಯಂತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಒಂದು ವಾರ ಕರಾವಳಿ, ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಬೀದರ್, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಕೊಪ್ಪಳ ಜಿಲ್ಲೆಗಳಲ್ಲೂ ಹೆಚ್ಚಿನ ಮಳೆಯಾಗುವ ಸಂಭವ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಕ್ಷಿಣ ಕನ್ನಡ, ಉತ್ತರ ಕನ್ನಡ ಭಾಗದಲ್ಲಿ ಮಳೆಯಾಗುವ ಸಂಭವ ಇದೆ. ಉತ್ತರ ಒಳನಾಡಿನಲ್ಲಿ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕೊಪ್ಪಳ, ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ 24 ಗಂಟೆ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular