HomeKarnatakaಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ 5 ದಿನ ಮಳೆ ಮುನ್ಸೂಚನೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ 5 ದಿನ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕೆಲವು ದಿನಗಳಿಂದ ಮರೆಯಾಗಿದ್ದ ಮಳೆ ಮತ್ತೆ ದರ್ಶನ ನೀಡುವ ಮುನ್ಸೂಚನೆ ಸಿಕ್ಕಿದೆ. ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪರಿಣಾಮ ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. 18 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ವಾಯುಭಾರ ಕುಸಿತ ಪರಿಣಾಮ ಆಂಧ್ರಪ್ರದೇಶದಲ್ಲಿ ಒತ್ತಡ ಕುಸಿತವಾಗುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಭಾಗದ ಹಲವು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ಉತ್ತರ ಒಳನಾಡು ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ ಸೆಪ್ಟಂಬರ್ 12 ರಿಂದ 16 ರವರೆಗೆ ಹಗುರದಿಂದ ಭಾರಿ ಮಳೆಯಾಗುವ ಸಂಭವವಿದೆ. ಅದೇ ರೀತಿ ವಿಜಯಪುರ, ಧಾರವಾಡ, ಬೆಳಗಾವಿ, ರಾಯಚೂರು, ಗದಗ, ಯಾದಗಿರಿ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ.

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಭಾಗವಹಿಸಲು ಜಿಲ್ಲಾಧಿಕಾರಿ ಕರೆ

ಶಿವಮೊಗ್ಗ: ಸರ್ಕಾರದ ನಿರ್ದೇಶನದಂತೆ ದಿನಾಂಕ 15-09-2026 ರಂದು ಯುವ ಸಂಸತ್ತು ಸಭೆಗೆ ಚಾಲನೆ ನೀಡುವ ಮೂಲಕ ‘ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಶಿವಮೊಗ್ಗ ಇವರ ಜಂಟಿ ಸಹಯೋಗದಲ್ಲಿ ಈ ಕಾರ್ಯಕ್ರಮವು ದಿನಾಂಕ: 15-09-2026 ರ ಬೆಳಿಗ್ಗೆ 10 ಗಂಟೆಗೆ ಡಾ. ಬಿ.ಆರ್. ಅಂಬೇಡ್ಕರ್ ಭವನ, ಶಿವಮೊಗ್ಗ ಇಲ್ಲಿ ನಡೆಯಲಿದೆ.

ಸೆಪ್ಟೆಂಬರ್ 15ರಂದು ನಡೆಯುವ ಜಿಲ್ಲಾ ಮಟ್ಟದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಭಾಗವಹಿಸಲು ಜಿಲ್ಲಾಧಿಕಾರಿ ಕರೆ ನೀಡಿದ್ದಾರೆ. ಈ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಎಲ್ಲಾ ಇಲಾಖೆಯ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಕೋರಿದ್ದಾರೆ.’

ವಿಶ್ವ ಕೌಶಲ್ಯ ಸ್ಪರ್ಧೆ-2026

ಶಿವಮೊಗ್ಗ: ವಿಶ್ವ ಕೌಶಲ್ಯ ಸ್ಪರ್ಧೆ-2026 ಹಾಗೂ ರಾಜ್ಯದಲ್ಲಿ ನಡೆಯುವ ಇಂಡಿಯಾ ಸ್ಕಿಲ್ ಕಂಪಿಟಿಷನ್ ಕರ್ನಾಟಕ‌ 2026 ವಿವಿಧ ಕೌಶಲ್ಯ ಸ್ಪರ್ಧೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸ್ಪರ್ಧೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು www.skillindiadigital.gov.in  ಜಾಲತಾಣದಲ್ಲಿ ದಿ:15.09.2026 ರೊಳಗೆ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ: https://www.skillindiadigital.gov.in/home, ಸಹಾಯವಾಣಿ: 9606492216/7204237323 ಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅಶೋಕ್ ಎಸ್. ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular