HomeKarnatakaBREAKING: ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ರಾತ್ರಿಯಿಡಿ ಭಾರೀ ಮಳೆ

BREAKING: ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ರಾತ್ರಿಯಿಡಿ ಭಾರೀ ಮಳೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ರಾತ್ರಿಯಿಂದ ಬೆಳಗಿನವರೆಗೆ ಭಾರೀ ಮಳೆಯಾಗಿದೆ. ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ.

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಿದೆ. ನಗರದ ಹಲವು ಕಡೆ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡಿದ್ದಾರೆ.

ಮೆಜೆಸ್ಟಿಕ್ ಸೇರಿದಂತೆ ಹಲವು ಕಡೆ ಮಳೆಯಾಗಿದೆ. ಶಾಂತಿನಗರ, ಜಯನಗರ, ಶ್ರೀನಗರ, ತ್ಯಾಗರಾಜನಗರ, ಕೆಆರ್ ಮಾರುಕಟ್ಟೆ, ಟೌನ್ ಹಾಲ್, ಕಾರ್ಪೊರೇಷನ್ ಸರ್ಕಲ್, ಮೈಸೂರು ರಸ್ತೆ, ವಿಜಯನಗರ, ಮಾಗಡಿ ರೋಡ್, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಜಾಲಹಳ್ಳಿ, ಪೀಣ್ಯ, ಹೆಬ್ಬಾಳ, ಯಲಹಂಕ, ಬನ್ನೇರುಘಟ್ಟ, ಕೆಆರ್ ಪುರಂ, ಟಿನ್ ಫ್ಯಾಕ್ಟರಿ, ಬನ್ನೇರುಘಟ್ಟ, ಮಹದೇವಪುರ, ಬೆಳ್ಳಂದೂರು, ಮಾರತಹ,ಳ್ಳಿ ಕಾಡುಬೀಸನಹಳ್ಳಿ, ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್, ಜೆಪಿ ನಗರ, ಬನಶಂಕರಿ, ಕತ್ರಿಗುಪ್ಪೆ, ಪದ್ಮನಾಭನಗರ, ನಾಯಂಡಹಳ್ಳಿ, ಕೆಂಗೇರಿ, ನಾಗರಬಾವಿ, ಆರ್.ಆರ್. ನಗರಮ ಕೋಣನಕುಂಟೆಮ ತಲಘಟ್ಟಪುರ ಸೇರಿದಂತೆ ಹಲವು ಕಡೆ ಮಳೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular