HomeKarnatakaಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದೆ. ಮುಂದಿನ ಒಂದು ವಾರ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳ ಹೊರತುಪಡಿಸಿ ಉಳಿದೆಡೆ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್ 12, 13ರಂದು ಸಾಧಾರಣ ಮಳೆಯಾಗಲಿದೆ. ಆಗಸ್ಟ್ 14 ರಿಂದ 16 ರವರೆಗೆ ಅತಿ ಸಾಧಾರಣ ಮಳೆ ಆಗಲಿದೆ. ಬಳಿಕ ಎರಡು ದಿನಗಳ ನಂತರ ಸಾಧಾರಣ ಮಳೆ ಆಗಲಿದೆ. ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಒಂದು ವಾರ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular