HomeKarnatakaಬೆಂಗಳೂರಿನಲ್ಲಿ ಮಳೆಗೆ ಜನರು ತತ್ತರ : ಮಾಜಿ ಸಿಎಂ `BSY' ಸಿಟಿ ರೌಂಡ್ಸ್

ಬೆಂಗಳೂರಿನಲ್ಲಿ ಮಳೆಗೆ ಜನರು ತತ್ತರ : ಮಾಜಿ ಸಿಎಂ `BSY’ ಸಿಟಿ ರೌಂಡ್ಸ್

ಬೆಂಗಳೂರು :   ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆಗೆ ಜನರು ತತ್ತರಿಸಿದ್ದು,  ಈ ನಡುವೆ ಇಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬೆಂಗಳೂರು ಸಿಟಿ ರೌಂಡ್ಸ್ ನಡೆಸಿದ್ದಾರೆ.

ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಪ್ರದಕ್ಷಿಣೆ ಹಾಕಿದ ಬಿ.ಎಸ್.ಯಡಿಯೂರಪ್ಪ ಅವರು, ಸ್ಥಗಿತಗೊಂಡ  ಕಾಮಗಾರಿಗಳ ವೀಕ್ಷಣೆ ಮಾಡಿದ್ದಾರೆ. ಹೊಸಕೆರೆಹಳ್ಳಿ ಭಾಗದಲ್ಲಿ ಸ್ಥಗಿತಗೊಂಡ ಕಾಮಗಾರಿಗಳ ವೀಕ್ಷಣೆ ಮಾಡಿದ್ದಾರೆ. ಬಿ.ಎಸ್. ಯಡಿಯೂರಪ್ಪಗೆ ಶಾಸಕರಾದ ಅಶ್ವತ್ಥ್ ನಾರಾಯಣ, ಮುನಿರತ್ನ  ಸಾಥ್ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಜನರು ತತ್ತರಿಸಿದ್ದು, ಮಳೆಯಿಂದಾಗಿ  ಭಾರೀ ಸಮಸ್ಯೆಗಳು ಎದುರಾಗುತ್ತಿವೆ. ಈ ಬಗ್ಗೆ ಸ್ಥಳೀಯರು ಬಿಬಿಎಂಪಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular