HomeKarnatakaBREAKING: ವರುಣಾರ್ಭಟಕ್ಕೆ ಅಂಡರ್ ಪಾಸ್ ನಲ್ಲಿ ಕಾರು ಮುಳುಗಿ ದುರಂತ; ನೀರಿನಲ್ಲಿ ಮುಳುಗಿದ್ದ ಯುವತಿ ಸಾವು

BREAKING: ವರುಣಾರ್ಭಟಕ್ಕೆ ಅಂಡರ್ ಪಾಸ್ ನಲ್ಲಿ ಕಾರು ಮುಳುಗಿ ದುರಂತ; ನೀರಿನಲ್ಲಿ ಮುಳುಗಿದ್ದ ಯುವತಿ ಸಾವು

ಬೆಂಗಳೂರು; ಬೆಂಗಳೂರಿನಲ್ಲಿ ಸಂಭವಿಸಿದ ಮಹಾಮಳೆಗೆ ಯುವತಿ ಬಲಿಯಾಗಿರುವ ಘಟನೆ ನಡೆದಿದೆ. ಕೆ.ಆರ್. ಸರ್ಕಲ್ ಅಂಡರ್ ಪಾಸ್ ನಲ್ಲಿ ಕಾರು ಮುಳುಗಿದ ಪ್ರಕರಣದಲ್ಲಿ ನೀರಿನಲ್ಲಿ ಮುಳುಗಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಯುವತಿ ಸಾವನ್ನಪ್ಪಿದ್ದಾರೆ.

22 ವರ್ಷದ ಭಾನುರೇಖಾ ಮೃತ ಯುವತಿ. ಇನ್ಫೋಸಿಸ್ ಉದ್ಯೋಗಿದ್ದ ಭಾನುರೇಖಾ ಕುಟುಂಬದ ಜೊತೆ ಕಾರಿನಲ್ಲಿ ತೆರಳುತ್ತಿದ್ದಾಗ ಭಾರಿ ಮಳೆಯಿಂದಾಗಿ ಕೆ.ಆರ್.ಸರ್ಕಲ್ ನ ಅಂಡರ್ ಪಾಸ್ ನಲ್ಲಿ ಕಾರು ಮುಳುಗಡೆಗೊಂಡಿದೆ. ವಿಜಯವಾಡದಿಂದ ಬೆಂಗಳೂರಿಗೆ ಬಂದಿದ್ದ ಕುಟುಂಬದ ಒಟ್ಟು 6 ಜನರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾರು ಮುಳುಗುತ್ತಿದ್ದಂತೆ ಸ್ಥಳೀಯರು, ಪೊಲೀಸರು ತಕ್ಷಣ ರಕ್ಷಾಣಾಕಾರ್ಯದಲ್ಲಿ ತೊಡಗಿದ್ದಾರೆ. ನಾಲ್ವರನ್ನು ರಕ್ಷಿಸಲಾಗಿದ್ದು, ಅವರಲ್ಲಿ ಯುವತಿ ಭಾನುರೇಖಾ ಸ್ಥಿತಿ ಗಂಭೀರವಾಗಿತ್ತು. ಆಕೆಯನ್ನು ಸೆಂಟ್ ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದ ಯುವತಿ ಕೊನೆಯುಸಿರೆಳೆದಿದ್ದಾರೆ.

ಆಸ್ಪತ್ರೆಯಲ್ಲಿ ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ.

For Latest News Updates, Join Our Whatsapp Community🚩
RELATED ARTICLES

Most Popular