HomeKarnatakaBIG NEWS: ಬಾಂಬ್ ಬೆದರಿಕೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ

BIG NEWS: ಬಾಂಬ್ ಬೆದರಿಕೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿರುವ ಘಟನೆ ರಾಮಮೂರ್ತಿನಗರದಲ್ಲಿ ನಡೆದಿದ್ದು, ಆತಂಕಕ್ಕೆ ಕಾರಣವಾಗಿದೆ.

ರಾಮಮೂರ್ತಿನಗರದ ಫ್ಲೈಓವರ್ ಬಳಿ ಬ್ಯಾಗ್ ಪತ್ತೆಯಾಗಿದ್ದು, ಬ್ಯಾಗ್ ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ರಾಮಮೂರ್ತಿ ನಗರ ಪೊಲೀಸರು ಆಗಮಿಸಿ ಬ್ಯಾಗ್ ಪರಿಶೀಲನೆ ನಡೆಸಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಪದೇ ಪದೇ ಹುಸಿ ಬಾಂಬ್ ಬೆದರಿಕೆ ಸಂದೇಶ, ಕರೆಗಳು ಬರುತ್ತಿರುವ ಬೆನ್ನಲ್ಲೇ ನಿನ್ನೆಯಷ್ಟೇ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಿಬ್ಬಂದಿಗಳ ಕಟ್ಟಡದ ಬಾತ್ ರೂಮ್ ನ ಕನ್ನಡಿ ಮೇಲೆ ಬಾಂಬ್ ಬೆದರಿಕೆ ಸಂದೇಶ ಬರೆದಿರುವುದು ಪತೆಯಾಗಿತ್ತು. ಇದರ ಬೆನ್ನಲ್ಲೇ ಇದೀಗ ಫ್ಲೈಓವರ್ ಬಳಿ ಅನುಮನಾಸ್ಪದ ರೀತಿಯಲ್ಲಿ ಬ್ಯಾಗ್ ಪತ್ತೆಯಾಗಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular