HomeKarnatakaಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: ತಾಯಿಯ ಪ್ರಿಯಕರನಿಂದಲೇ ಮಗುವಿನ ಮೇಲೆ ಅತ್ಯಾಚಾರ, ಕೊಲೆ

ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: ತಾಯಿಯ ಪ್ರಿಯಕರನಿಂದಲೇ ಮಗುವಿನ ಮೇಲೆ ಅತ್ಯಾಚಾರ, ಕೊಲೆ

ಬೆಂಗಳೂರು: ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂರುವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಘಟನೆ ನಡೆದಿದೆ.

ಕಾಮಾಕ್ಷಿಪಾಳ್ಯದ ಕಾವೇರಿ ನಗರದಲ್ಲಿ ಸೋಮವಾರ ಸಂಜೆ ಘಟನೆ ನಡೆದಿದ್ದು, ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು 26 ವರ್ಷದ ಆರೋಪಿಯನ್ನು ಬಂಧಿಸಿದ್ದಾರೆ. ಬಾಗಲಕೋಟೆ ಮೂಲದ ಮಹಿಳೆ ಕೌಟುಂಬಿಕ ಕಲಹದಿಂದ ಗಂಡನಿಂದ ದೂರವಾಗಿದ್ದು, ಮಗುವಿನೊಂದಿಗೆ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಗಾರ್ಮೆಂಟ್ಸ್ ಕೆಲಸಕ್ಕೆ ಹೋಗುತ್ತಿದ್ದ ಮಹಿಳೆಗೆ ಆರೋಪಿ ಪರಿಚಯವಾಗಿ ಇಬ್ಬರ ನಡುವೆ ಅಕ್ರಮ ಸಂಬಂಧ ಬೆಳೆದಿತ್ತು. ಮಹಿಳೆಯ ಮನೆಯಲ್ಲಿಯೇ ಆರೋಪಿ ನೆಲೆಸಿದ್ದು, ಮದ್ಯವ್ಯಸನಿಯಾಗಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೋಮವಾರ ಸಂಜೆ ಮಗುವಿನ ಮೇಲೆ ಅತ್ಯಾಚಾರ ಎಸಗಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಸಂಜೆ ಗಾರ್ಮೆಂಟ್ ಕೆಲಸ ಮುಗಿಸಿ ಮನೆಗೆ ಬಂದ ಮಹಿಳೆಗೆ ಮಗು ಪ್ರಜ್ಞಾಹಿನ ಸ್ಥಿತಿಯಲ್ಲಿರುವುದು ಗೊತ್ತಾಗಿದೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪರೀಕ್ಷೆ ನಡೆಸಿದ ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಮನೆ ಬಳಿ ಬಂದು ವಿಚಾರಣೆ ನಡೆಸಿದಾಗ ಮಗುವಿನ ಮುಖದ ಮೇಲೆ ಗಾಯಗಳು ಕಂಡು ಬಂದಿದೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಕೊಲೆ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು ಆರೋಪಿಯನ್ನು ಬಂಧಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular