ಬೆಂಗಳೂರು:
ಬೆಂಗಳೂರಿನಲ್ಲಿ ಯುವತಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಘಟನೆ ತಡರಾತ್ರಿ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೆಆರ್ ಪುರಂ ರೈಲ್ವೆ ನಿಲ್ದಾಣದ ಕಡೆಯಿಂದ ಯುವತಿ ಬರುತ್ತಿದ್ದ ವೇಳೆ ಘಟನೆ ನಡೆದಿದೆ. ಅಣ್ಣನ ಯುವಕನ ಜೊತೆ ಯುವತಿ ಬರುತ್ತಿದ್ದಾಗ ಎಳೆದೊಯ್ದು ಇಬ್ಬರು ಅತ್ಯಾಚಾರ ಎಸಗಿದ್ದಾರೆ. ಯುವತಿ ಮೇಲೆ ಅತ್ಯಾಚಾರ ಎಸಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎನ್ನಲಾಗಿದೆ.
ತಡರಾತ್ರಿ ಒಂದು ಗಂಟೆ ಸುಮಾರಿಗೆ ಘಟನೆ ನಡೆದಿದೆ. ಬಿಹಾರದ ಯುವತಿ ಕೇರಳದಲ್ಲಿ ಕೆಲಸಕ್ಕೆ ಹೋಗಿದ್ದು, ಅಲ್ಲಿಂದ ಬಿಹಾರಕ್ಕೆ ವಾಪಸ್ ಹೋಗಲು ಬೆಂಗಳೂರಿಗೆ ಬಂದಿದ್ದಾಳೆ. ತನ್ನ ದೊಡ್ಡಪ್ಪನ ಮಗ ಅಣ್ಣನ ಜೊತೆಗೆ ರೈಲು ನಿಲ್ದಾಣಕ್ಕೆ ಹೋಗುತ್ತಿದ್ದಾಗ ಘಟನೆ ನಡೆದಿದೆ.
ತಂಗಿಯನ್ನು ಮಹಾದೇವಪುರಕ್ಕೆ ಬಿಡಲು ಹೋಗುವಾಗ ಬೈಕ್ ಅಡ್ಡಗಟ್ಟಿದ ದುಷ್ಕರ್ಮಿಗಳು ಯುವತಿ ಎಳೆದೊಯ್ದು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಕಿರುಚಾಟ ಕೇಳಿದ ಸ್ಥಳೀಯರು ಆರೋಪಿಗಳನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.