HomeKarnatakaಐವಿಎಫ್ ಮೂಲಕ ಜನ್ಮ ನೀಡಿದ ಅವಳಿ ಶಿಶು ಕೊಂದ ತಾಯಿ ಆತ್ಮಹತ್ಯೆ ಯತ್ನ

ಐವಿಎಫ್ ಮೂಲಕ ಜನ್ಮ ನೀಡಿದ ಅವಳಿ ಶಿಶು ಕೊಂದ ತಾಯಿ ಆತ್ಮಹತ್ಯೆ ಯತ್ನ

ಬೆಂಗಳೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ತಾಯಿ ತನ್ನ ನಾಲ್ಕು ತಿಂಗಳ ಅವಳಿ ಹೆಣ್ಣು ಶಿಶುಗಳನ್ನು ನೀರಲ್ಲಿ ಮುಳುಗಿಸಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ಬೆಂಗಳೂರಿನಲ್ಲಿ ಮಂಗಳವಾರ ನಡೆದಿದೆ.

ವಾಜರಹಳ್ಳಿಯ ಬಿಸಿಸಿಎಚ್ಎಸ್ ಲೇಔಟ್ ನಿವಾಸಿ ರಾಮಲಿಂಗಪ್ಪ ದಂಪತಿ ಮಕ್ಕಳು ಕೊಲೆಯಾಗಿದ್ದಾರೆ. ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಅವರ ಪತ್ನಿ ಉಮಾದೇವಿ ಅವರನ್ನು ರಕ್ಷಿಸಿ ಕುಟುಂಬದವರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮನೆಯಲ್ಲಿ ಇಬ್ಬರು ಮಕ್ಕಳನ್ನು ಕೊಂದು ಉಮಾದೇವಿಗೆ ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿರುವ ರಾಮಲಿಂಗಪ್ಪ ಅವರಿಗೆ ಹತ್ತು ವರ್ಷಗಳ ಹಿಂದೆ ಉಮಾದೇವಿ ಜೊತೆಗೆ ಮದುವೆಯಾಗಿದ್ದು, ಮದುವೆ ನಂತರ ದಂಪತಿಗೆ ಸಂತಾನವಾಗಿರಲಿಲ್ಲ. ನಾಲ್ಕು ತಿಂಗಳ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ಐವಿಎಫ್ ಮೂಲಕ ಇಬ್ಬರು ಹೆಣ್ಣುಮಕ್ಕಳಿಗೆ ಉಮಾದೇವಿ ಜನ್ಮ ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆರಿಗೆ ನಂತರ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅವರು ಮಕ್ಕಳ ಬಗ್ಗೆ ನಿರಾಸಕ್ತಿ ತೋರಿಸುತ್ತಿದ್ದರು. ಅಸಹಜವಾಗಿ ವರ್ತಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಮಂಗಳವಾರ ಮಕ್ಕಳನ್ನು ನೀರಲ್ಲಿ ಮುಳುಗಿಸಿ ಕೊಂದು ತಾನು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗಿದೆ. ತಲಘಟ್ಟಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular