HomeKarnatakaBIG NEWS: ರಸ್ತೆಯಲ್ಲಿ ಆಯಿಲ್ ಚೆಲ್ಲಿ ಅವಾಂತರ; ಸ್ಕಿಡ್ ಆಗಿ ಬಿದ್ದ 10ಕ್ಕೂ ಹೆಚ್ಚು ಬೈಕ್...

BIG NEWS: ರಸ್ತೆಯಲ್ಲಿ ಆಯಿಲ್ ಚೆಲ್ಲಿ ಅವಾಂತರ; ಸ್ಕಿಡ್ ಆಗಿ ಬಿದ್ದ 10ಕ್ಕೂ ಹೆಚ್ಚು ಬೈಕ್ ಸವಾರರು

ಬೆಂಗಳೂರು: ರಾಜದಾನಿ ಬೆಂಗಳೂರಿನ ರಸ್ತೆಯಲ್ಲಿ ಆಯಿಲ್ ಚೆಲ್ಲಿ ಅವಾಂತರ ಸೃಷ್ಟಿಯಾಗಿದೆ. ಆಯಿಲ್ ಚಿಲ್ಲಿರುವ ಪರಿಣಾಮ ವಾಹನ ಸವಾರರು ಸ್ಕಿಡ್ ಆಗಿ ಬಿದ್ದು ಗಾಯಗೊಂಡಿರುವ ಘಟನೆ ನಡೆದಿದೆ.

ಮೈಸೂರು ರಸ್ತೆಯಲ್ಲಿ ರಸ್ತೆ ತುಂಬೆಲ್ಲ ಆಯಿಲ್ ಚೆಲ್ಲಿದ್ದು, 10ಕ್ಕೂ ಹೆಚ್ಚು ಬೈಕ್ ಸವಾರರು ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಿಕ್ಕಪೇಟೆ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸ್ಥಳಕ್ಕೆ ಆಗಮಿಸಿರುವ ಪೊಲೀಸರು, ಪಾಲಿಕೆ ಸಿಬ್ಬಂದಿಗಳು ಆಯಿಲ್ ಚೆಲ್ಲಿದ ಜಾಗದಲ್ಲಿ ಮಣ್ಣು ಹಾಕಿ ಆಯಿಲ್ ತೆಗೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular