HomeKarnatakaBREAKING NEWS: ಬೆಂಗಳೂರಿನಲ್ಲಿ 2 ಕೋಟಿಗೂ ಅಧಿಕ ಮೌಲ್ಯದ ಶ್ರೀಗಂಧದ ತುಂಡುಗಳು ಜಪ್ತಿ

BREAKING NEWS: ಬೆಂಗಳೂರಿನಲ್ಲಿ 2 ಕೋಟಿಗೂ ಅಧಿಕ ಮೌಲ್ಯದ ಶ್ರೀಗಂಧದ ತುಂಡುಗಳು ಜಪ್ತಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಶ್ರೀಗಂಧದ ತುಂಡುಗಳನ್ನು ಅರಣ್ಯ ಜಾಗೃತ ದಳ ಸಿಬ್ಬಂದಿ ದಾಳಿ ನಡೆಸಿ ಜಪ್ತಿ ಮಾಡಿದ್ದಾರೆ.

ಬೆಂಗಳೂರಿನ ಕೆ.ಆರ್.ಪುರಂ ಬಳಿಯ ಐಟಿಐ ಫ್ಯಾಕ್ಟರಿಯ ಗೋಡೌನ್ ಮೇಲೆ ದಾಳಿ ನಡೆಸಿರುವ ಅರಣ್ಯ ಜಾಗೃತ ದಳ ಸಿಬ್ಬಂದಿ, ಬರೋಬ್ಬರಿ 2 ಕೋಟಿಗೂ ಅಧಿಕ ಮೌಲ್ಯದ ಶ್ರೀಗಂಧದ ತುಂಡುಗಳನ್ನು ವಶಕ್ಕೆ ಪಡೆದಿದ್ದಾರೆ.

ಅಕ್ರಮವಾಗಿ ಗಂಧದ ತುಂಡುಗಳನ್ನು ಸಾಗಾಟ ಮಾಡಲೆಂದು ಸಂಗ್ರಹಿಸಿ ಇಡಲಾಗಿತ್ತು. ಈ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದ್ದು ಆರೋಪಿಗಳನ್ನು ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular