HomeLatest NewsBIG NEWS: ಬೆಂಗಳೂರು ಗ್ರಾಮಾಂತರ ಜಿಲ್ಲೆ AC, DC ಕೋರ್ಟ್ ನಲ್ಲಿ ಬಾಕಿ ಪ್ರಕರಣ: ನೋಟಿಸ್...

BIG NEWS: ಬೆಂಗಳೂರು ಗ್ರಾಮಾಂತರ ಜಿಲ್ಲೆ AC, DC ಕೋರ್ಟ್ ನಲ್ಲಿ ಬಾಕಿ ಪ್ರಕರಣ: ನೋಟಿಸ್ ಕೊಟ್ಟು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ: ಸಿಎಂ‌ ಖಡಕ್ ಸೂಚನೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಮತ್ತು ಎರಡು ಜಿಲ್ಲೆಗಳಲ್ಲಿ ಮಾತ್ರ ಎಸಿ, ಡಿಸಿ, ತಹಶೀಲ್ದಾರ್ ಕೋರ್ಟ್ ಗಳಲ್ಲಿ ಪ್ರಕರಣಗಳು ಬಾಕಿ ಉಳಿದಿರುವುದಕ್ಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ನೋಟಿಸ್ ಕೊಟ್ಟು ಸಸ್ಪೆಂಡ್ ಮಾಡುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದರು.

ವಿಧಾನಸೌಧದಲ್ಲಿ ಪ್ರಗತಿ ಪರಿಶೀಲನಾ ಸಭೆ ವೇಳೆ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಎಸಿ, ಡಿಸಿ, ತಹಶೀಲ್ದಾರ್ ಕೋರ್ಟ್ ಗಳಲ್ಲಿ ಬಾಕಿ ಕೇಸುಗಳು ಶೀರ್ಘ ವಿಲೇವಾರಿ ಆಗುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ, ಬೆಂಗಳೂರು ಗ್ರಾಮಾಂತರ ಮತ್ತು ಎರಡು ಜಿಲ್ಲೆಗಳಲ್ಲಿ ಮಾತ್ರ AC ಮತ್ತು DC ಕೋರ್ಟ್ ಗಳಲ್ಲಿ ಐದು ವರ್ಷಕ್ಕೂ ಹಳೆಯದಾದ ಪ್ರಕರಣಗಳು ಬಾಕಿ ಇದೆ. ಇದಕ್ಕೆ ತೀವ್ರ ಅಸಮಾಧಾನ ವ್ಯತಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ, Justice delayed is justice denied ಎನ್ನುವ ಮಾತನ್ನು ನೆನಪಿಡಿ. ಇದನ್ನು ಸಹಿಸಲು ಸಾಧ್ಯವಿಲ್ಲ. ಉಳಿದ ಜಿಲ್ಲೆಗಳಲ್ಲಿ ಪ್ರಗತಿ ಕಾಣುವಾಗ ಕೆಲವು ಜಿಲ್ಲೆಗಳಲ್ಲಿ ಮಾತ್ರ ಪ್ರಗತಿಯಾಗುತ್ತಿಲ್ಲ ಎಂದರೆ ಸಹಿಸಲು ಸಾಧ್ಯವಿಲ್ಲ ಎಂದರು.

ಈ ಬಗ್ಗೆ ನೋಟಿಸ್ ನೀಡಿ ಕ್ರಮ ಕೈಗೊಳ್ಳಿ. ಗತ್ಯವಿದ್ದರೆ ಹೇಳಿ ಹಚ್ಚುವರಿ ಎಸಿ, ಡಿಸಿಗಳನ್ನು ಕೊಡಬಹುದು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular