HomeKarnatakaಬೆಂಗಳೂರಿನಲ್ಲಿ ಮಳೆ ಅವಾಂತರ: ಲಾರಿ ಮೇಲೆ ಬಿದ್ದ ಮರ: ಚಾಲಕ ಜಸ್ಟ್ ಎಸ್ಕೇಪ್

ಬೆಂಗಳೂರಿನಲ್ಲಿ ಮಳೆ ಅವಾಂತರ: ಲಾರಿ ಮೇಲೆ ಬಿದ್ದ ಮರ: ಚಾಲಕ ಜಸ್ಟ್ ಎಸ್ಕೇಪ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿಯಿಡಿ ಸುರಿದ ಧಾರಾಕಾರ ಮಳೆಯಿಂದಾಗಿ ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ಒಂದೆಡೆ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದರೆ. ಮತ್ತೊಂದೆಡೆ ಮರಗಳ ಕೊಂಬೆ ಮುರಿದು ಬಿದ್ದು ರಸ್ತೆ ಸಂಚಾರ ಬಂದ್ ಆಗಿದೆ. ಈ ನಡುವೆ ಲಾರಿ ಮೇಲೆ ಬೃಹತ್ ಮರವೊಂದು ಮುರಿದು ಬಿದ್ದ ಘಟನೆ ನಡೆದಿದೆ.

ಗೊರಗುಂಟೆಪಾಳ್ಯದ ಸಿಗ್ನಲ್‌ ಬಳಿ ಲಾರಿ ಮೇಲೆ ಬೃಹತ್‌ ಮರವೊಂದು ಮುರಿದು ಬಿದ್ದಿದೆ. ಇದರಿಂದ ಸುಮ್ಮನಹಳ್ಳಿ – ತುಮಕೂರು ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ಬೆಳಗಿನ ಜಾವ 5:30ರ ಸುಮಾರಿಗೆ ಈ ಘಟನೆ ನಡೆದಿದೆ. ಸಿಗ್ನಲ್‌ನಲ್ಲಿ ಎರಡು ಕಾರು ಒಂದು ಲಾರಿ ನಿಂತಿದ್ದವು. ಈ ವೇಳೆ ಲಾರಿ ಮೇಲೆ ಮರ ಬಿದ್ದಿದೆ. ಲಾರಿ ಮೇಲೆ ಮರ ಬಿದ್ದಿದ್ದರಿಂದ ಎರಡು ಕಾರುಗಳು ಅಪಾಯದಿಂದ ಪಾರಾಗಿವೆ. ಅಕಸ್ಮಾತ್‌ ಮರ ಕಾರುಗಳ ಮೇಲೆ ಬಿದ್ದಿದ್ದರೆ ಭಾರೀ ಹಾನಿಯಾಗುವ ಸಾಧ್ಯತೆ ಇತ್ತು. ಅದೃಷ್ಟವಶಾತ್ ಲಾರಿ ಚಾಲಕ ಅಪಾಯದಿಂದ ಪಾರಾಗಿದ್ದಾನೆ.

ಗೊರಗುಂಟೆಪಾಳ್ಯ – ಔಟರ್ ರಿಂಗ್ ರೋಡ್ ವಾಹನ ಸಂಚಾರ ಬಂದ್‌ ಆಗಿದ್ದು, ಜಿಬಿಎ ಸಿಬ್ಬಂದಿ ಹಾಗೂ ಟ್ರಾಫಿಕ್‌ ಪೊಲೀಸರು ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ನಗರದಲ್ಲಿ ತಡರಾತ್ರಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಹಲವೆಡೆ ಅವಾಮ್ತರಗಳು ಸೃಷ್ಟಿಯಾಗಿವೆ, ರಾತ್ರಿ 10 ಗಂಟೆಯ ನಂತರ ನಗರದ ಹಲವೆಡೆ ಭಾರೀ ಮಳೆಯಾಗಿದೆ. ಸತತ 4 ಗಂಟೆಗಳ ಕಾಲ ವರುಣಾರ್ಭಟ ಅಬ್ಬರಿಸಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಪ್ರಮುಖ ರಸ್ತೆಗಳಲ್ಲಿ ನೀರು ನಿಂತು ಸಂಚಾರ ಅಸ್ತವ್ಯಸ್ತಗೊಂಡಿದೆ.

ಜಯನಗರದಲ್ಲಿ ಫಾರಂ-7 ದುರ್ಬಳಕೆ ಆರೋಪ: ಐವರ ವಿರುದ್ಧ FIR ದಾಖಲು

ಬೆಂಗಳೂರು: ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಫಾರಂ-7 ದುರ್ಬಳಕೆ ಮಾಡಿ ಮತದಾರರ ಹೆಸರುಗಳನ್ನು ಡಿಲಿಟ್ ಮಾಡಲು ಯತ್ನಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಹಾಗೂ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ನೀಡಿದ ದೂರಿನ ಆಧಾರದ ಮೇಲೆ ಜಯನಗರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಅಥವಾ ಹೆಸರನ್ನು ಸೇರಿಸುವುದನ್ನು ಆಕ್ಷೇಪಿಸಲು ಇರುವ ಅರ್ಜಿಯಾಗಿರುವ ಫಾರ್ಮ್‌ 7 ನ್ನು ಕ್ಷೇತ್ರದಲ್ಲಿ ವ್ಯಾಪಕವಾಗಿ ಬಳಕೆ ಮಾಡಲಾಗುತ್ತಿದೆ. ಜಯನಗರದಲ್ಲಿ ಒಟ್ಟು 5,698 ಮತದಾರರ ಹೆಸರುಗಳನ್ನ ಪಟ್ಟಿಯಿಂದ ಡಿಲೀಟ್ ಮಾಡಲು ಫಾರಂ-7 ಅರ್ಜಿಗಳನ್ನ ಸಲ್ಲಿಸಿರುವ ಬಗ್ಗೆ ಸೌಮ್ಯಾ ರೆಡ್ಡಿ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಅರ್ಜಿಗಳ ಹಿಂದೆ ಉದ್ದೇಶಪೂರ್ವಕವಾಗಿ ಮತದಾರರ ಹೆಸರುಗಳನ್ನ ಅಳಿಸುವ ಪ್ರಯತ್ನ ನಡೆದಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಅರ್ಜಿಗಳಲ್ಲಿ ಸಿ. ರಮೇಶ್ ಮತ್ತು ರೂಪಾ ಎಂಬುವವರ ಹೆಸರನ್ನ ಬಳಸಲಾಗಿದೆ. ಆದರೆ, ತಮ್ಮ ಯಾವುದೇ ಮಾಹಿತಿ ಅಥವಾ ಒಪ್ಪಿಗೆಯಿಲ್ಲದೆ ತಮ್ಮ ವೈಯಕ್ತಿಕ ಮಾಹಿತಿಯನ್ನ ನಕಲು ಮಾಡಿ ಫಾರಂ-7 ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದೂ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ದಾಖಲೆಗಳೂ ಇವೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪ್ರಕರಣದಲ್ಲಿ ಬಿಜೆಪಿ ಮುಖಂಡರಾದ ರಾಮಕೃಷ್ಣ, ಯೋಗೇಶ್ ಸೇರಿದಂತೆ ಒಟ್ಟು ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ದೂರಿನಲ್ಲಿ ಜಯನಗರ ಶಾಸಕ ಸಿ.ಕೆ ರಾಮಮೂರ್ತಿ ಅವರ ಹೆಸರನ್ನೂ ಉಲ್ಲೇಖಿಸಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular