HomeKarnatakaಬೆಂಗಳೂರು ದಕ್ಷಿಣದಲ್ಲಿ ಫೆ.21ರಂದು 98 ಆಸ್ತಿಗಳ ಹರಾಜು

ಬೆಂಗಳೂರು ದಕ್ಷಿಣದಲ್ಲಿ ಫೆ.21ರಂದು 98 ಆಸ್ತಿಗಳ ಹರಾಜು

ಆಸ್ತಿ ತೆರಿಗೆಯನ್ನು ಪಾವತಿ ಮಾಡದ ಸ್ವತ್ತುಗಳನ್ನು ಹರಾಜು ಹಾಕಲು ಬೆಂಗಳೂರು ದಕ್ಷಿಣ ನಗರ ಪಾಲಿಕೆ ಆಯುಕ್ತ ಕಛೇರಿ ಪ್ರಕಟಣೆ ಹೊರಡಿಸಿದೆ. ದಿನಾಂಕ 21-02-2026ರಂದು ವಲಯ ಜಂಟಿ ಆಯುಕ್ತರು (ಜಯನಗರ ವಲಯ) ಅವರ ಅಧ್ಯಕ್ಷತೆಯಲ್ಲಿ ಆಸ್ತಿ ತೆರಿಗೆ ಸುಸ್ತಿದಾರರೆಂದು ಗುರುತಿಸಲಾಗಿರುವ ಸ್ವತ್ತುಗಳಿಂದ ಹರಾಜಿನ ಮೂಲಕ ಬಾಕಿ ಆಸ್ತಿ ತೆರಿಗೆ ವಸೂಲಾತಿ ಮಾಡಲಾಗುವುದು ಎಂದು ಹೇಳಿದೆ.

ಪಾಲಿಕೆ ವಾಣಿಜ್ಯ ಕಛೇರಿಗಳ ಕಟ್ಟಡ, 2ನೇ ಮಹಡಿ, 9ನೇ ಮುಖ್ಯರಸ್ತೆ, 2ನೇ ಬ್ಲಾಕ್ ಜಯನಗರ ಇಲ್ಲಿನ ಸಭಾಂಗಣದಲ್ಲಿ ಹರಾಜು ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ. ಸ್ವತ್ತುಗಳ ಮಾಹಿತಿಯನ್ನು ಅದೇ ಕಟ್ಟಡದಲ್ಲಿನ ವಲಯ ಜಂಟಿ ಆಯುಕ್ತರು (ಜಯನಗರ ವಲಯ) ಕಛೇರಿಯ ಸೂಚನಾ ಫಲಕದಲ್ಲಿ ಹಾಕಲಾಗಿದೆ.

ಆಸ್ತಿಗಳ ಹರಾಜು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯನ್ನು ಸರ್ಕಾರದ ಆದೇಶದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನಾಗಿ ಪುನರ್ ರಚಿಸಿ, ಸದರಿ ಪ್ರಾಧಿಕಾರದ ಅಡಿಯಲ್ಲಿ 5 ಪ್ರತ್ಯೇಕ ಬೆಂಗಳೂರು ನಗರ ಪಾಲಿಕೆಗಳನ್ನಾಗಿ ರಚಿಸಲಾಗಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಸ್ವತ್ತುಗಳಿಂದ ಸ್ವೀಕರಿಸಲಾಗುವ ಆಸ್ತಿ ತೆರಿಗೆಯನ್ನು ಪಾಲಿಕೆಯಲ್ಲಿ ಸಾರ್ವಜನಿಕರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಥವಾ ನಿರ್ವಹಿಸಲು ಉಪಯೋಗಿಸಲಾಗುತ್ತದೆ.

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ 2025ರ ಅಡಿಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲಾ ಸ್ವತ್ತುಗಳು ಪ್ರತಿಯೊಂದು ಆರ್ಥಿಕ ಸಾಲಿನಲ್ಲಿ ಆಸ್ತಿ ತೆರಿಗೆ ಪಾವತಿ ಮಾಡಬೇಕಾಗಿರುತ್ತದೆ. ಆಸ್ತಿ ತೆರಿಗೆ ಪಾವತಿಸದ ಪ್ರಕರಣಗಳಲ್ಲಿ ಆಸ್ತಿ ತೆರಿಗೆ ವಸೂಲಿ ಮಾಡುವ ಕಾರ್ಯವಿಧಾನವನ್ನು ಆಸ್ತಿ ತೆರಿಗೆ ನಿರ್ಧರಣೆ, ವಸೂಲಾತಿ ಮತ್ತು ನಿರ್ವಹಣೆ ನಿಯಮಗಳು 2024ರ ಅಡಿಯಲ್ಲಿ ಅಧಿಸೂಚಿಸಲಾಗಿರುತ್ತದೆ.

ಸದರಿ ಕಾಯ್ದ ಹಾಗೂ ನಿಯಮಗಳಲ್ಲಿ ತಿಳಿಸಿರುವಂತೆ ಆಸ್ತಿ ತೆರಿಗೆ ಸುಸ್ತಿದಾರರಿಗೆ ಕಾರಣ ಕೇಳಿ ಪತ್ರ, ಆಸ್ತಿ ತೆರಿಗೆ ಬೇಡಿಕೆ ಪತ್ರ ಜಾರಿ ಮಾಡಲಾಗಿದ್ದು, ಸಾಕಷ್ಟು ಕಾಲಾವಕಾಶವನ್ನು ನೀಡಲಾದ ನಂತರದಲ್ಲೂ ಬಾಕಿ ಉಳಿಸಿಕೊಂಡ ಪ್ರಕರಣಗಳ ಮಾಲೀಕರಿಗೆ ನಿಯತಕಾಲಿಕವಾಗಿ ಮೊಬೈಲ್ ಸಂದೇಶಗಳ ಮೂಲಕ ತಮ್ಮ ಸ್ವತ್ತಿನ ಆಸ್ತಿ ತೆರಿಗೆಯನ್ನು ಪಾವತಿಸಲು ತಿಳಿಸಲಾಗಿರುತ್ತದೆ.

ಸಾಕಷ್ಟು ಅವಕಾಶಗಳನ್ನು ನೀಡಿದ ನಂತರ ಗುರುತಿಸಲಾಗಿರುವ ಆಸ್ತಿ ತೆರಿಗೆಯನ್ನು ಪಾವತಿಸದ ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಜಯನಗರ ವಲಯ ವ್ಯಾಪ್ತಿಯಲ್ಲಿನ ಸ್ವತ್ತುಗಳನ್ನು ಕಾಯ್ದೆ ಹಾಗೂ ನಿಯಮಗಳನ್ವಯ ಹರಾಜು ಪ್ರಕ್ರಿಯೆಗೆ (Distress Sale) ಒಳಪಡಿಸಲು ತೀರ್ಮಾನಿಸಲಾಗಿರುತ್ತದೆ.

ಆಸ್ತಿಗಳ ವಿವರಗಳು

* Residential 71
* Non-residential 07
* Both (Res & Non-res) 16
* Vacant Land 4

ಹರಾಜು ಪ್ರಕ್ರಿಯೆಯ ಮುನ್ನ ಪಟ್ಟಿಯಲ್ಲಿನ ಸ್ವತ್ತಿಗೆ ಸಂಪೂರ್ಣ ಆಸ್ತಿ ತೆರಿಗೆ ಪಾವತಿಸಿದಲ್ಲಿ ಹರಾಜಿನಿಂದ ಕೈಬಿಡಲಾಗುವುದು ಎಂದು ಬೆಂಗಳೂರು ದಕ್ಷಿಣ ನಗರ ಪಾಲಿಕೆ ಅಪರ ಆಯುಕ್ತರು (ಕಂದಾಯ) ತಿಳಿಸಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular