HomeKarnatakaರೀಫಿಲ್ಲಿಂಗ್ ವೇಳೆ ನಾಲ್ಕು ಸಿಲಿಂಡರ್ ಗಳು ಸ್ಫೋಟ: ಹೊತ್ತಿಕೊಂಡ ಬೆಂಕಿ: ಪಕ್ಕದಲ್ಲಿದ್ದ ಶಾಲೆ, ಮನೆಗಳಿಗೆ ...

ರೀಫಿಲ್ಲಿಂಗ್ ವೇಳೆ ನಾಲ್ಕು ಸಿಲಿಂಡರ್ ಗಳು ಸ್ಫೋಟ: ಹೊತ್ತಿಕೊಂಡ ಬೆಂಕಿ: ಪಕ್ಕದಲ್ಲಿದ್ದ ಶಾಲೆ, ಮನೆಗಳಿಗೆ ಹಾನಿ

ಬೆಂಗಳೂರು: ಮಂಗಳೂರಿನ ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ಬೆನ್ನಲ್ಲೇ ಇತ್ತ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಸ್ಫೋಟ ಸಂಭವಿಸಿದೆ. ಸಿಲಿಂದರ್ ರೀಫಿಲ್ಲಿಂಗ್ ವೇಳೆ ನಾಲ್ಕು ಸಿಲಿಂಡರ್ ಗಳು ಬ್ಲಾಸ್ಟ್ ಆಗಿದ್ದು, ಭಾರಿ ಬೆಂಕಿ ಅವಘಟ ಸಂಭವಿಸಿದೆ.

ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಕ್ರಮವಾಗಿ ಗ್ಯಾಸ್ ಸಿಲಿಂಡರ್‌ಗಳನ್ನು ರೀಫಿಲ್ಲಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ನಾಲ್ಕು ಎಲ್‌ಪಿಜಿ ಸಿಲಿಂಡರ್‌ಗಳು ಸ್ಫೋಟಗೊಂಡಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಫೋಟದ ತೀವ್ರತೆಗೆ ಒಂದು ಸಿಲಿಂಡರ್ ಹಾರಿ ಸಮೀಪದ ಶಾಲೆಯ ಕಿಟಕಿಗೆ ಅಪ್ಪಳಿಸಿದೆ. ಈ ಘಟನೆ ಅಟಲ್ ಬಿಹಾರಿ ವಾಜಪೇಯಿ ಪಾರ್ಕ್ ಬಳಿ, ಕಗ್ಗದಾಸಪುರದಲ್ಲಿ ಸಂಭವಿಸಿದೆ. ಸ್ಫೋಟದಿಂದಾಗಿ ಶಾಅಲೆ, ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ.

ಸ್ಫೋಟದಿಂದಾಗಿ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿತ್ತು. ಘಟನೆಯ ಬಗ್ಗೆ ಮಾಹಿತಿ ಲಭಿಸುತ್ತಿದ್ದಂತೆ, ಅಗ್ನಿಶಾಮಕ ದಳದವರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಅದೃಷ್ಟವಶಾತ್, ಈ ದುರ್ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಅಥವಾ ಗಂಭೀರ ಗಾಯಗಳಾಗಿಲ್ಲ. ಸ್ಥಳದಲ್ಲಿ ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ನಡೆಯುತ್ತಿತ್ತು ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಮಂಗಳೂರು MRPL ನಲ್ಲಿ ಭೀಕರ ಸ್ಫೋಟ: ಹೊತ್ತಿ ಉರಿದ ಕಾರ್ಖಾನೆ: ಮುಗಿಲೆತ್ತರಕ್ಕೆ ವ್ಯಾಪಿಸಿದ ದಟ್ಟ ಹೊಗೆ

ಮಂಗಳೂರು: ಮಂಗಳೂರು ರಿಫೈನರಿ ಮತ್ತು ಪೆಟ್ರೋ ಕೆಮಿಕಲ್ ಲಿಮಿಟೆಡ್ (MRPL) ನಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಕಾರ್ಖಾನೆ ಬೆಂಕಿಯಲ್ಲಿ ಧಗ ಧಗನೆ ಹೊತ್ತಿ ಉರಿಯುತ್ತಿದೆ. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಮಂಗಳೂರಿನ ಜೋಕಟ್ಟೆ ಬಳಿ ಇರುವ ಎಂಆರ್‌‌ಪಿಎಲ್ ಘಟಕದಲ್ಲಿ ಇಂದು ಮಧ್ಯಾಹ್ನ 12:30ರ ಸುಮಾರಿಗೆ ಭಾರೀ ಸ್ಪೋಟದ ಶಬ್ದ ಕೇಳಿಬಂದಿದ್ದು, ಸ್ಫೋಟದ ಬೆನ್ನಲ್ಲೇ ಕಾರ್ಖಾನೆ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದ್ದು, ಮುಗಿಲೆತ್ತರಕ್ಕೆ ದಟ್ಟ ಹೊಗೆ ಆವರಿಸಿದೆ.

ಸ್ಫೋಟದ ರಭಸಕ್ಕೆ ಪಕ್ಕದಲ್ಲಿರುವ ಅಂಗನವಾಡಿ, ಗ್ರಾಮ ಪಂಚಾಯತ್ ಕಚೇರಿಯ ಕಿಟಕಿಗಳ ಗಾಜುಗಳು ಪುಡಿ ಪುಡಿಯಾಗಿವೆ. ಹಲವು ಮನೆಗಳಿಗೂ ಹಾನಿಯಾಗಿವೆ. ಎಂಆರ್‌‌ಪಿಎಲ್ ತೈಲ ಘಟಕದಲ್ಲಿ ಸ್ಫೋಟ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಆಂಬುಲೆನ್ಸ್ ಗಳು ದೌಡಾಯಿಸಿವೆ.

ಸ್ಥಳೀಯರಲ್ಲಿ ಆತಂಕವುಂಟಾಗಿದ್ದು, ಪೊಲೀಸರು ಹಾಗೂ ಅಧಿಕಾರಿಗಳು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಸ್ಪೋಟದ ಬೆನ್ನಲ್ಲೇ ಸುತ್ತಮುತ್ತಲಿನ ಪ್ರದೇಶಗಳಿಗೆ ದಟ್ಟ ಹೊಗೆ ಆವರಿಸಿದ್ದು, ಘಟಕದಲ್ಲಿ ದೊಡ್ಡ ಮಟ್ಟದ ದುರಂತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular