ಬೆಂಗಳೂರು : ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, DCM ಡಿಕೆ ಶಿವಕುಮಾರ್ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ.
ಸ್ನೇಹಮಯಿ ಕೃಷ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿಯ ಪದಾಧಿಕಾರಿಗಳ ವಿರುದ್ಧ ನಿರ್ಲಕ್ಷ್ಯಕ್ಕಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 106 ರ ಅಡಿಯಲ್ಲಿ ಪ್ರಕರಣ ದಾಖಲಿಸಲು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭೀಕರ ಕಾಲ್ತುಳಿತ ಪ್ರಕರಣದಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ಸದ್ಯ 9 ಜನರು ದಾಖಲಾಗಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಈ ಹಿನ್ನೆಲೆಯಲ್ಲಿ ಇಬ್ಬರಿಗೆ ಟಿಬಿಯಾ ಸರ್ಜರಿ ಮಾಡಲು ವೈದ್ಯರು ನಿರ್ಧರಿಸಿದ್ದಾರೆ.

